Advertisement

ಪಿ.ರವಿಕುಮಾರ್‌ ಸಿಎಂ ಪ್ರಧಾನ ಕಾರ್ಯದರ್ಶಿ

10:57 PM Aug 02, 2019 | Lakshmi GovindaRaj |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪ್ರಧಾನ ಕಾರ್ಯದರ್ಶಿಯಾಗಿ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ನೇಮಕಗೊಂಡಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ.ಇ.ವಿ.ರಮಣರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.

Advertisement

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮಾನಾಂತರಕ್ಕೆ ಮೇಲ್ದರ್ಜೆಗೇರಿಸಿ ಆದೇಶಿಸಲಾಗಿದೆ. ಇದೇ ವೇಳೆ, ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿರುವ ಶಿವಯೋಗಿ ಕಳಸದ್‌ ಅವರನ್ನು ನೇಮಿಸಲಾಗಿದೆ.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿದೇರ್ಶಕ ಸ್ಥಾನದ ಹೆಚ್ಚುವರಿ ಹೊಣೆಗಾರಿಕೆಯನ್ನೂ ಅವರಿಗೆ ನೀಡಲಾಗಿದೆ. ಮುಖ್ಯಮಂತ್ರಿಯವರ ಕಾರ್ಯದರ್ಶಿ ಸ್ಥಾನದಲ್ಲಿದ್ದ ಸೆಲ್ವಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಇ.ವಿ.ರಮಣರೆಡ್ಡಿ ಹಾಗೂ ಸೆಲ್ವಕುಮಾರ್‌ ಇಬ್ಬರಿಗೂ ಹುದ್ದೆಯನ್ನು ತೋರಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next