Advertisement

Sandalwood: ಅನಿಮಾಗೆ ಆದಿ ಹೀರೋ

02:04 PM Mar 31, 2024 | Team Udayavani |

ಪಾರು ಸೀರಿಯಲ್‌ ಮೂಲಕ ಕಿರುತೆರೆ ಪ್ರೇಕ್ಷಕರ ಪರಿಚಿತರಾಗಿರುವ ಆದಿ (ಶರತ್‌ ಪದ್ಮನಾಭ್‌) ನಾಯಕನಾಗಿ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್‌ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ “ಅನಿಮಾ’ ಟೈಟಲ್‌  ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.

Advertisement

ಅನಿಮಾಗೆ ವರ್ಧನ್‌ ಎಂ.ಎಚ್‌ ನಿರ್ದೇಶನವಿದೆ. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ವರ್ಧನ್‌ ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಟೈಟಲ್‌ ಪೋಸ್ಟರ್‌ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ. ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಅನಿಮಾ ಸಿನಿಮಾ ಕೊನೆ ಹಂತದ ಚಿತ್ರೀಕರಣ­ದಲ್ಲಿದೆ.  ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗಲೇ ಶೂಟಿಂಗ್‌ ನಡೆಸಲಾ ಗಿದೆ.  ಶರತ್‌ ನಾಯಕನಾಗಿ ನಟಿಸುತ್ತಿದ್ದು, ಅನುಷಾ ಕೃಷ್ಣ ನಾಯಕಿಯ ರಾಗಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಪಂಕಜ್‌ ಎಸ್‌ ನಾರಾಯಣ್‌, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ,  ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಎನ್‌.ಕೆ.ರಾಜ್‌ ಛಾಯಾಗ್ರಹಣ, ವಿರಾಜ್‌ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್‌ ಹಿನ್ನೆಲೆ ಸಂಗೀತ, ಉಜ್ವಲ್‌ ಚಂದ್ರ ಸಂಕಲನ ಅನಿಮಾ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next