Advertisement

ಪಚ್ಚನಾಡಿ ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ : ಸುತ್ತಲೂ ಆತಂಕದ ವಾತಾವರಣ

11:18 PM Apr 04, 2021 | Team Udayavani |

ಮಂಗಳೂರು: ಮಂಗಳೂರು ಬಳಿಯ ಪಚ್ಚನಾಡಿ ಕಸ ಸಂಸ್ಕರಣಾ ಘಟಕಕ್ಕೆ ರವಿವಾರ ರಾತ್ರಿ ಬೆಂಕಿ ಬಿದ್ದಿದ್ದು ಸುತ್ತಮುತ್ತಲು ಆತಂಕಕ್ಕೆ ಕಾರಣವಾಗಿದೆ.

Advertisement

ಮಂಗಳೂರು ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿದ ಬಳಿಕ ಸಂಸ್ಕರಣೆ ಮಾಡುವ ಘಟಕ ಇದಾಗಿದೆ. ರವಿವಾರ ರಾತ್ರಿ ಸುಮಾರು 9 ಗಂಟೆಯ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಸುತ್ತಮುತ್ತಲಿನ ಮಂದಿ ತತ್ ಕ್ಷಣ ಅಗ್ನಿಶಾಮಖ ಇಲಾಖೆಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸುತ್ತಮುತ್ತಲಿನ ಸಾರ್ವಜನಿಕರು ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಶಾರ್ಟ್ ಸರ್ಕೂಟ್ನಿಂದ ಬೆಂಕಿ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಟೈರ್ ಸ್ಫೋಟಗೊಂಡು ಟೆಂಪೋ ಪಲ್ಟಿ : ಮಹಿಳೆಯರು ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿಗೆ ಗಾಯ

Advertisement

 

Advertisement

Udayavani is now on Telegram. Click here to join our channel and stay updated with the latest news.

Next