Advertisement

ಶುದ್ಧ ಕುಡಿಯುವ ನೀರು ಘಟಕಗಳ ಲೋಕಾರ್ಪಣೆ

12:04 PM Aug 05, 2017 | |

ಕೆಂಗೇರಿ: ಇತ್ತೀಚಿನ ದಿನಗಳಲ್ಲಿ ಅಂತರ್ಜಲದಿಂದಲೂ ಕಲುಷಿತ ನೀರು ಬರುತ್ತಿದ್ದು ಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಕ್ಷೇತ್ರ  ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು. 

Advertisement

ಕ್ಷೇತ್ರದ ಉತ್ತರಿ ಮತ್ತು ಬಾದೇಕಟ್ಟೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, “ಕ್ಷೇತ್ರ ವ್ಯಾಪ್ತಿಯಲ್ಲಿ ಈ ವರೆಗೆ 145 ಘಟಕಗಳನ್ನು  ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ನೀರಿನ ಘಟಕಗಳನ್ನು ಪ್ರಾರಂಭಿಸಲಾಗುವುದು,’ ಎಂದು ಹೇಳಿದರು. 

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್‌.ಪರ್ವಿಜ್‌ 500 ಕುಟುಂಬಗಳಿಗೆ 20 ಲೀಟರ್‌ನ ಕ್ಯಾನ್‌ಗಳನ್ನು ಉಚಿತವಾಗಿ ವಿತರಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next