Advertisement
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೆ ನಡೆಸಿದ ಪಾದಯಾತ್ರೆಯಲ್ಲಿ ನಿಜಾಂಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಪಾದಯಾತ್ರೆ ನಡೆಸಿತು. ಆದರೆ, ಈಗ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಯಾವುದೇ ರೀತಿ ಕಾನೂನು ಬಾಹಿರವಾಗಿ ನಡೆಯದೇ ಇರುವ ಪ್ರಕರಣವನ್ನು ಜನರಿಗೆ ಪಾದಯಾತ್ರೆ ಮಾಡುವ ಮೂಲಕ ತಪ್ಪು ಮಾಹಿತಿ ಕೊಡಲು ಪ್ರಯತ್ನಿಸುತ್ತಿದ್ದಾರೆ. ಪಾದಯಾತ್ರೆ ಅನವಶ್ಯಕ ಎಂದರು.
Related Articles
Advertisement
ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಸಚಿವರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗುತ್ತಿದೆ. ತನಿಖೆ ನಡೆಯುತ್ತಿದೆ. ವರದಿ ಬಂದ ಮೇಲೆ ತಪ್ಪು ಮಾಡಿದ್ದರೆ ಸಚಿವರ ವಿರುದ್ದವೂ ಕ್ರಮ ತೆಗೆದುಕೊಳ್ಳ ಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪೃಥ್ವಿ ಎಂಬ ಯುವಕ ನ್ಯಾಯ ಸಿಗದಿದ್ದರೆ ಭಯೋತ್ಪಾದಕ ಆಗುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿರುವುದರ ಬಗ್ಗೆ ಪ್ರತಿಕ್ರಿಸಿದ ಪರಮೇಶ್ವರ್, ಆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಇಂತಹ ಆರೋಪಗಳು ಬಂದಾಗ ಯಾವುದೇ ಪೊಲೀಸ್ ಠಾಣೆಯಲ್ಲಿ ಇಲಾಖೆಯವರು ತನಿಖೆ ನಡೆಸಿ ಪೊಲೀಸರದ್ದೇ ತಪ್ಪಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಮೇಕೆ ಮಾಂಸ ಎಂಬುದು ಬಹಿರಂಗನಾಯಿ ಮಾಂಸ ಮಾರಾಟ ಪ್ರಕರಣ ಕುರಿತು ಪ್ರತಿಕ್ರಿಯಿಸಿ ”ರಾಜಸ್ಥಾನದಿಂದ ಪ್ರತಿವಾರ ಅಥವಾ 15 ದಿನಗಳಿಗೊಮ್ಮೆ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಆದರೆ ಕೆಲವರು ಅನಾವಶ್ಯಕವಾಗಿ ನಾಯಿ ಮಾಂಸ ಎಂದು ಆಪಾದನೆ ಮಾಡಿದ್ದರು. ಈಗ ಪ್ರಯೋಗಾಲಯ ನೀಡಿದ ವರದಿಯ ಅನ್ವಯ ಅದು ಮೇಕೆ ಮಾಂಸ ಎಂಬುದು ಬಹಿರಂಗಗೊಂಡಿದೆ. ಆದ್ದರಿಂದ ಅನಾವಶ್ಯಕವಾಗಿ ದುರುದ್ದೇಶ ಇಟ್ಟುಕೊಂಡು ಈ ರೀತಿ ಆರೋಪ ಮಾಡುವುದು ಸರಿಯಲ್ಲ” ಎಂದರು.