Advertisement

ಪಡ್ಡೆಹುಲಿ ಟ್ರೇಲರ್‌ಗೆ ಮೆಚ್ಚುಗೆ

09:03 AM Apr 14, 2019 | Lakshmi GovindaRaju |

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಹೀರೋ ಆಗಿರುವ “ಪಡ್ಡೆಹುಲಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್‌ 19 ರಂದು ಚಿತ್ರ ತೆರೆಕಾಣುತ್ತಿದೆ. ಚಿತ್ರತಂಡ ಈಗ ಚಿತ್ರದ ಎರಡನೇ ಟ್ರೇಲರ್‌ ಬಿಡುಗಡೆಯಾಗಿದ್ದು, ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ.

Advertisement

ಚಿತ್ರದ ಹಲವು ಅಂಶಗಳ ಜೊತೆಗೆ ಪುನೀತ್‌ ರಾಜಕುಮಾರ್‌ ಅವರ ಎಂಟ್ರಿಯೂ ಈ ಟ್ರೇಲರ್‌ನಲ್ಲಿರುವ ಮೂಲಕ ಪುನೀತ್‌ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಚಿತ್ರವನ್ನು ಗುರುದೇಶಪಾಂಡೆ ನಿರ್ದೇಶಿಸಿದ್ದು, ರಮೇಶ್‌ ರೆಡ್ಡಿ ನಿರ್ಮಿಸಿದ್ದಾರೆ.

ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ ಹಾಗೂ ಪುನೀತ್‌ರಾಜಕುಮಾರ್‌ ಗೆಸ್ಟ್‌ ಅಪಿಯರೆನ್ಸ್‌ ಮಾಡಿದರೆ, ರವಿಚಂದ್ರನ್‌ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ನಿಶ್ವಿ‌ಕಾ ನಾಯ್ಡು ನಾಯಕಿಯಾಗಿದ್ದು, ಅಜನೀಶ್‌ ಲೋಕನಾಥ್‌ ಸಂಗೀತವಿದೆ. ಚಿತ್ರದಲ್ಲಿ ಹತ್ತು ಹಾಡುಗಳಿದ್ದು, ಹತ್ತನ್ನೂ ಸಂದರ್ಭಕ್ಕೆ ತಕ್ಕಂತೆ ಚಿತ್ರೀಕರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next