Advertisement

ಪಡುಕುತ್ಯಾರಿನಲ್ಲಿ ಯಂತ್ರ ಶ್ರೀ ಭತ್ತ ಬೇಸಾಯ ಪ್ರಾತ್ಯಕ್ಷಿಕೆ ಕಾರ್ಯಕ್ರಮ

09:54 AM Aug 06, 2020 | keerthan |

ಕಾಪು: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು, ಹಾಗೂ ಜೇಸಿಐ ಕಾಪು ಇವರ ಜಂಟಿ ಸಂಯೋಜನೆಯೊಂದಿಗೆ 2020-21ನೇ ಸಾಲಿನ ಬೀಜೋಪಚಾರ ಆಂದೋಲನ ಹಾಗೂ ಯಂತ್ರ ಶ್ರೀ ಭತ್ತ ಬೇಸಾಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಆ. 3 ರಂದು ಪಡುಕುತ್ಯಾರಿನಲ್ಲಿ ನಡೆಯಿತು.

Advertisement

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠದ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಮಾತನಾಡಿ, ಆಧ್ಯಾತ್ಮ ಮತ್ತು ಕೃಷಿ ಚಟುವಟಿಕೆಗಳು ಪರಸ್ಪರ ಹೊಂದಾಣಿಕೆ ಇರುವಂತದ್ದಾಗಿದ್ದು, ನಮ್ಮ ಆಹಾರಕ್ಕೆ ಬೇಕಿರುವ ಪದಾರ್ಥ – ಬೆಳೆಗಳನ್ನು ನಾವೇ ಬೆಳೆಸುವ ನಿಟ್ಟಿನಲ್ಲಿ ಯೋಚಿಸುವ ಅಗತ್ಯತೆಯಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಕರಾವಳಿ ಪ್ರಾದೇಶಿಕ ನಿರ್ದೇಶಕ ವಸಂತ ವಿ. ಸಾಲ್ಯಾನ್ ಮಾತನಾಡಿ, ಜನರು ಕೃಷಿ ಪದ್ಧತಿಯಿಂದ ವಿಮುಖರಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಉತ್ತೇಜಿಸುವ ಸಲುವಾಗಿ ಯೋಜನೆಯ ಮೂಲಕವಾಗಿ ಯಂತ್ರ ಶ್ರೀ ಭತ್ತ ಬೇಸಾಯ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲಾಗುತ್ತಿದೆ. ಇದು ಕೇವಲ ಪ್ರಾತ್ಯಕ್ಷಿಕೆಗೆ ಸೀಮಿತವಾಗದೇ ಬೆಳೆ ನೆಟ್ಟ ಬಳಿಕ ಇಳುವರಿ ತೆಗೆದು, ಅದನ್ನು ಮಾರುಕಟ್ಟೆಗೆ ತಲುಪಿಸುವವರೆಗೂ ಯೋಜನೆಯು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ಉಡುಪಿ ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ರಾಘವೇಂದ್ರ ನಾಯಕ್ ಶಿರ್ವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

Advertisement

ಉಡುಪಿ ಜಿಲ್ಲಾ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್, ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಗಣೇಶ್ ಬಿ., ಕುತ್ಯಾರು ಗ್ರಾ.ಪಂ. ಆಡಳಿತಾಧಿಕಾರಿ ಡಾ. ಅರುಣ್ ಹೆಗ್ಡೆ, ಕಾಪು ಜೇಸಿಐ ಅಧ್ಯಕ್ಷ ವಿನೋದ್ ಕಾಂಚನ್, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಅಧ್ಯಕ್ಷ ಬಿ. ಸೂರ್ಯ ಕುಮಾರ್ ಆಚಾರ್ಯ, ಉಪಾಧ್ಯಕ್ಷ ಶ್ರೀಧರ ಆಚಾರ್ಯ ವಡೇರಹೋಬಳಿ, ಯೋಜನೆಯ ಅಧಿಕಾರಿಗಳಾದ ರೋಹಿತ್ ಎಚ್., ಅಶೋಕ್, ರಾಘವೇಂದ್ರ ಆಚಾರ್ಯ, ಮಮತಾ, ಒಕ್ಕೂಟದ ಅಧ್ಯಕ್ಷ ಸಂಜೀವ ಕುಲಾಲ್, ಕೃಷಿ ಇಲಾಖೆಯ ಅಧಿಕಾರಿ ಪುಷ್ಪಾ, ಸ್ಥಳೀಯರಾದ ಪ್ರವೀಣ್ ಕುಮಾರ್ ಗುರ್ಮೆ, ಶಾರದೇಶ್ವರಿ ಗುರ್ಮೆ ಮೊದಲಾದವರು ಉಪಸ್ಥಿತರಿದ್ದರು.

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನದ ಗೌ. ಪ್ರ. ಕಾರ್ಯದರ್ಶಿ ಲೋಕೇಶ್ ಆಚಾರ್ಯ ಕಂಬಾರು ಸ್ವಾಗತಿಸಿದರು. ಯೋಜನೆಯ ಕೃಷಿ ಅಧಿಕಾರಿ ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next