Advertisement
7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಯಿತು, ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ.
Related Articles
Advertisement
ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು, . ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪ್ರಶಸ್ತಿ ಸ್ವೀಕರಿಸಿದರು.
ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು,ಭಾರತದ ಮೊದಲ ಮಹಿಳಾ ಏರ್ ಮಾರ್ಷಲ್ ಡಾ ಪದ್ಮಾ ಬಂಡೋಪಾಧ್ಯಾಯ (ನಿವೃತ್ತ) ವೈದ್ಯಕೀಯ ಕ್ಷೇತ್ರಕ್ಕಾಗಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸದರು.
ಒಲಿಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪದ್ಮಭೂಷಣ ಪ್ರಶಸ್ತಿ, ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಪದ್ಮಶ್ರೀ,ಗಾಯಕ ಅದ್ನಾನ್ ಸಾಮಿ, ಇತ್ತೀಚಿನ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳಾ ಹಾಕಿ ತಂಡವನ್ನು ಮುನ್ನಡೆಸಿದ್ದ ರಾಣಿ ರಾಂಪಾಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು.