Advertisement

2020 ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ : ಸುಷ್ಮಾ, ಎಸ್ ಪಿಬಿಗೆ ಮರಣೋತ್ತರ

01:25 PM Nov 08, 2021 | Team Udayavani |

ಹೊಸದಿಲ್ಲಿ : 2020 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವರು ವಿವಿಧ ಕ್ಷೇತ್ರದ 119 ಸಾಧಕರಿಗೆ ಪ್ರದಾನ ಮಾಡಿದರು.

Advertisement

7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಯಿತು, ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ.

ಪ್ರಖ್ಯಾತ ಗಾಯಕ ಎಸ್ .ಪಿ. ಬಾಲ ಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಯಿತು.

ಕನ್ನಡಿಗರಾದ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಅವರಿಗೆ ಪದ್ಮ ವಿಭೂಷಣ,ಖ್ಯಾತ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರಧಾನಿಸಲಾಯಿತು. ಅಕ್ಷರ ಸಂತ’ ಹರೇಕಳ ಹಾಜಬ್ಬ, ಕನ್ನಡತಿ ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

Advertisement

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು, . ಅವರ ಪುತ್ರಿ ಬಾನ್ಸುರಿ ಸ್ವರಾಜ್ ಪ್ರಶಸ್ತಿ ಸ್ವೀಕರಿಸಿದರು.

ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು,ಭಾರತದ ಮೊದಲ ಮಹಿಳಾ ಏರ್ ಮಾರ್ಷಲ್ ಡಾ ಪದ್ಮಾ ಬಂಡೋಪಾಧ್ಯಾಯ (ನಿವೃತ್ತ) ವೈದ್ಯಕೀಯ ಕ್ಷೇತ್ರಕ್ಕಾಗಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸದರು.

ಒಲಿಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪದ್ಮಭೂಷಣ ಪ್ರಶಸ್ತಿ, ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಪದ್ಮಶ್ರೀ,ಗಾಯಕ ಅದ್ನಾನ್ ಸಾಮಿ, ಇತ್ತೀಚಿನ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳಾ ಹಾಕಿ ತಂಡವನ್ನು ಮುನ್ನಡೆಸಿದ್ದ ರಾಣಿ ರಾಂಪಾಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next