ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ಚಿತ್ರ ಸಾಹಿತಿ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ(66) ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಾಸ್ತ್ರಿ ಅವರು ನ.24ರಂದು ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೆಲುಗುವಿನ “ಸಿರಿವೆನ್ನೆಲ’, “ರುದ್ರವೀಣಾ’, “ಸ್ವರ್ಣ ಕಮಲಂ’ ಸೇರಿ ಅನೇಕ ಪ್ರಸಿದ್ಧ ಸಿನಿಮಾಗಳ ಹಾಡಿಗೆ ಅವರು ಸಾಹಿತ್ಯ ಬರೆದಿದ್ದರು. 3,000ಕ್ಕೂ ಅಧಿಕ ಹಾಡುಗಳಿಗೆ ಸಾಹಿತ್ಯ ನೀಡಿದ್ದರು.
ಶಾಸ್ತ್ರಿ ಮತ್ತು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಜೋಡಿ ತೆಲುಗು ಸಂಗೀತ ಪ್ರಿಯರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಶಾಸ್ತ್ರಿ ಅವರಿಗೆ ಪದ್ಮಶ್ರೀ, ನಂದಿ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಇದನ್ನೂ ಓದಿ:ಗುರುದ್ವಾರದಲ್ಲಿ ಪೋಸ್ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್ ಮಾಡೆಲ್
ಅವರ ನಿಧನಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ತೆಲಂಗಾಣ ಸಿಎಂ ಕೆ.ಚಂದ್ರ ಶೇಖರ್ ರಾವ್ ಮತ್ತಿತರ ಗಣ್ಯರು ಕಂಬನಿ ಮಿಡಿದಿದ್ದಾರೆ.