Advertisement

ಹೊಂಬುಜದ ಪದ್ಮಾವತಿ ಅಮ್ಮನವರ ರಥೋತ್ಸವ

04:36 PM Mar 17, 2020 | Suhan S |

ರಿಪ್ಪನ್‌ಪೇಟೆ: ಸಮೀಪದ ಹೊಂಬುಜ ಪಾಲ್ಗುಣ ಮಾಸದ ಮೂಲಾನಕ್ಷತ್ರದ ಪವಿತ್ರ ದಿನದಂದು ಶ್ರೀಕ್ಷೇತ್ರ ಹೊಂಬುಜದಲ್ಲಿ ಭಗವಾನ್‌ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ರಥಯಾತ್ರಾ ಕಾರ್ಯಕ್ರಮಗಳ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳು ಶ್ರೀ ಡಾ| ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಸರಳವಾಗಿ ನೆರವೇರಿದವು.

Advertisement

ಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಕಂಬದಹಳ್ಳಿಯ ಶ್ರೀ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಸಂದೇಶ ನೀಡಿ, ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಶ್ರೀ ಮಠದ ಮನವಿಯನ್ನು ಗೌರವಿಸಿ ಧರ್ಮಬಾಂಧವರು ಶ್ರೀಕ್ಷೇತ್ರಕ್ಕೆ ಜಾತ್ರೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬಾರದೇ ಸಹಕರಿಸಿದ್ದಕ್ಕೆ ಧನ್ಯವಾದ ತಿಳಿಸಿದರು.

ಮುಂದಿನ ದಿನಗಳಲ್ಲಿ ಭಕ್ತಾದಿಗಳೆಲ್ಲರೂ ಸೇರಿ ಭಕ್ತಿ ಭಾವದಿಂದ ವಿಜೃಂಭಿಸುವ ಸುಯೋಗ ಬೇಗ ಕೂಡಿ ಬರಲಿ ಎಂದು ಆಶಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next