Advertisement
ಶನಿವಾರ ಸಚಿವ ಮಂಕಾಳ ವೈದ್ಯ ಅವರು ನಡಿಪಟ್ಣ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಕಾಂಕ್ರೀಟ್ ರಸ್ತೆಯ ಅಡಿಭಾಗದ ಮರಳು ಕೊಚ್ಚಿ ಹೋಗಿರುವುದನ್ನು ಗಮನಿಸಿದ್ದರು. ಬಳಿಕ ತುರ್ತು ಕಾಮಗಾರಿಗೆ ಶಾಸಕ ಸುರೇಶ್ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ಥಳದಲ್ಲೇ ಗುತ್ತಿಗೆದಾರರಿಗೆ ಆದೇಶಿಸಿದ್ದರು.
ನಡಿಪಟ್ಣದ ಶ್ರೀ ವಿಷ್ಣು ಭಜನ ಮಂದಿರದ ಬಳಿ ಬ್ಯಾರಿಕೇಡ್ ಅಳವಡಿಸಿ ಪ್ರವಾಸಿಗರನ್ನು ತಡೆ ಯಲಾಗುತ್ತಿದೆ. ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಾರ್ವಜನಿಕರ ಪ್ರವೇಶವನ್ನು ಜು. 31ರ ವರೆಗೆ ನಿರ್ಬಂಧಿಸಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಆದೇಶಿಸಿರುವುದಾಗಿ ಬೀಚ್‌ನ ಪ್ರಬಂಧಕ ವಿಜಯ್ ಶೆಟ್ಟಿ “ಉದಯವಾಣಿ’ಗೆ ತಿಳಿಸಿದ್ದಾರೆ.
Related Articles
Advertisement
ಬಿತ್ತನೆ ಬೀಜ ಕೊರತೆ: ಗಮನ ಸೆಳೆದ ಶಾಸಕ ಗುರ್ಮೆಕಾಪು: ಉಡುಪಿ ಜಿಲ್ಲೆಯನ್ನು ಕಾಡಿದ ಎಂಒ4 ಭತ್ತದ ಬೀಜದ ಕೊರತೆ ಕುರಿತಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿ ಸರಕಾರದ ಗಮನ ಸೆಳೆದರು. ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಉತ್ತರಿಸಿದ್ದು, ಕಳೆದ ಸಾಲಿನಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಎಂ.ಒ.4 ಭತ್ತದ ಬೀಜ ಉತ್ಪಾದನೆಯಲ್ಲಿ ಕೊರತೆ ಉಂಟಾಗಿತ್ತು. ಆದರೆ ರೈತರಿಗೆ ತೊಂದರೆ ಆಗದಂತೆ ಬದಲಿ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ. ಉಡುಪಿ ಜಿಲ್ಲೆಗೆ 249.50 ಕ್ವಿಂಟಾಲ್ ಎಂಒ-4 ಬಿತ್ತನೆ ಬೀಜವನ್ನು ಸರಬರಾಜು ಮಾಡಲಾಗಿದೆ. ಎಂಒ4 ತಳಿಗೆ ಪರ್ಯಾಯವಾಗಿ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತ 440 ಕ್ವಿಂಟಾಲ್, ಉಮಾ 196.50 ಕ್ವಿಂಟಾಲ್ ಮತ್ತು ಜ್ಯೋತಿ 79.50 ಕ್ವಿಂಟಾಲ್ ಬಿತ್ತನೆ ಬೀಜವನ್ನು ಸರಬರಾಜು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಬಾರಿ ಎಂಒ4 ಭತ್ತದ ಬೀಜ ಕೊರತೆಯಾಗಿರುವ ಕುರಿತಂತೆ ಉದಯವಾಣಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.