Advertisement

Padubidri: ರಸ್ತೆ ಅಪಘಾತ; ಗಾಯಾಳು ಸಾವು

08:38 PM Oct 06, 2024 | Team Udayavani |

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು-ಉಡುಪಿ ಏಕಮುಖ ರಸ್ತೆಯಲ್ಲಿ ಅ. 1ರ ರಾತ್ರಿಯ ವೇಳೆ ಮಾರುತಿ ಕಾರು ಢಿಕ್ಕಿಯಾಗಿ ತೀವ್ರತರ ಗಾಯಗೊಂಡಿದ್ದ ಅದಮಾರಿನ ಸುದರ್ಶನ್‌ (45) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನಾÉಕ್‌ ಆಸ್ಪತ್ರೆಯಲ್ಲಿ ಶನಿವಾರ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ.

Advertisement

ಸುದರ್ಶನ್‌ ಅವರು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ತಲೆ, ಎದೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದ ಅವರಿಗೆ ತೀವ್ರನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೂಲಿ ಕಾರ್ಮಿಕರೂ, ಅವಿವಾಹಿತರಾಗಿರುವ ಸುದರ್ಶನ್‌ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. ಅವರು ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next