ಕಾಪು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳವರ ಚಾತುರ್ಮಾಸ್ಯ ವ್ರತಾಚರಣೆಯು ಜು. 13 ರಂದು ಪಡುಕುತ್ಯಾರಿನ ಮಹಾ ಸಂಸ್ಥಾನದಲ್ಲಿ ಆರಂಭಗೊಂಡಿತು.
ಚಾತುರ್ಮಾಸ ವೃತಾಚರಣೆಯ ಆರಂಭೋತ್ಸವದ ಅಂಗವಾಗಿ ಶ್ರೀ ವಿಶ್ವಕರ್ಮ ಯಜ್ಞದೊಂದಿಗೆ ಚಾತುರ್ಮಾಸ್ಯ ವ್ರತ ಸಂಕಲ್ಪದ ವಿಧಿ ವಿಧಾನಗಳು ನಡೆದವು. ಬಳಿಕ ಶ್ರೀ ಗುರುಪಾದ ಪೂಜೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಮತ್ತು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಡೇರ ಹೋಬಳಿ ಶ್ರೀಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷ ಪಿ.ವಿ. ಗಂಗಾಧರ ಆಚಾರ್ಯ ಉಡುಪಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್ ಕಂಬಾರು, ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ, ಶ್ರೀ ನಾಗ ಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆಯ ಪ್ರಧಾನ ಸಂಚಾಲಕ ಬಿ. ಸೂರ್ಯಕುಮಾರ ಆಚಾರ್ಯ ಹಳೆಯಂಗಡಿ, ಅಸೆಟ್ ಉಪಾಧ್ಯಕ್ಷ ವಿವೇಕ್ ಆಚಾರ್ಯ ಮಂಚಕಲ್, ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸುಂದರ ಆಚಾರ್ಯ ಬೆಳುವಾಯಿ, ಆನೆಗುಂದಿ ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮಣ್ಣು, ಶ್ರೀ ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಎಸ್ ಆಚಾರ್ಯ ಕುತ್ಯಾರು, ವಿವಿಧ ದೇವಸ್ಥಾನಗಳ ಆಡಳಿತ ಮೊಕ್ತೇಸರರಾದ ಕೆ. ಕೇಶವ ಆಚಾರ್ಯ ಮಂಗಳೂರು, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಪುತ್ತೂರು ಪೋಳ್ಯ ಉಮೇಶ ಆಚಾರ್ಯ ಬಂಗ್ರ ಮಂಜೇಶ್ವರ, ಭಾಸ್ಕರ ಬಿ ಆಚಾರ್ಯ ಭಟ್ಕಳ, ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ, ಶೇಖರ ಆಚಾರ್ಯ ಕಾಪು, ಕೋಟೆಕಾರು ಪ್ರಭಾಕರ ಆಚಾರ್ಯ ಮಧೂರು, ಸಿಎ ಶ್ರೀಧರ ಆಚಾರ್ಯ ಪನ್ವೇಲ್, ತ್ರಾಸಿ ಸುಧಾಕರ ಆಚಾರ್ಯ, ಶಿಲ್ಪಿ ಸತೀಶ ಆಚಾರ್ಯ ಕಾರ್ಕಳ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕನ್ಯಾಡಿ: ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾತುರ್ಮಾಸ್ಯ ವ್ರತಾರಂಭ
ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ 18ನೇ ವರ್ಷದ ಚಾತುರ್ಮಾಸ್ಯ ವ್ರತ ಇದಾಗಿದ್ದು ಅವರು ಸತತ 7ನೇ ವರ್ಷದಲ್ಲಿ ಪಡುಕುತ್ಯಾರಿನ ಮಹಾ ಸಂಸ್ಥಾನದಲ್ಲಿ ಶುಭಕೃತ್ ನಾಮ ಸಂವತ್ಸರದ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಕೈಗೊಂಡಿದ್ದು ಸೆ. 10ರಂದು ವ್ರತಾಚರಣೆ ಸಮಾಪಣೆಗೊಳ್ಳಲಿದೆ. ಚಾತುರ್ಮಾಸ ವ್ರತಾಚರಣೆಯ ಸಂದರ್ಭದಲ್ಲಿ ಪ್ರತೀ ದಿನ ಭಜನೆ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಮಧ್ಯಾಹ್ನ ಗುರು ಪಾದುಕಾ ಪೂಜೆ, ಸತ್ಸಂಗ ಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಮತ್ತು ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್ ಕಂಬಾರ್ ತಿಳಿಸಿದ್ದಾರೆ.