ಹಳೆಯಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಮುಖ್ಯ ಜಂಕ್ಷನ್‌ನಲ್ಲಿ ಎರಡು ಎಕ್ಸ್‌ಪ್ರೆಸ್ ಬಸ್ ಹಾಗೂ ಒಂದು ಗೂಡ್ಸ್ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಮಂಗಳೂರಿನಿಂದ ಉಡುಪಿಯತ್ತ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ಬಸ್ಸೊಂದು ಹಠಾತ್ತನೆ ಬ್ರೇಕ್ ಹಾಕಿದ್ದರಿಂದ ಅದರ ಹಿಂದೆ ಇದ್ದ ಗೂಡ್ಸ್ ತುಂಬಿದ ಲಾರಿ ಢಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಮತ್ತೊಂದು ಎಕ್ಸ್‌ಪ್ರೆಸ್ ಬಸ್ಸು ಗೂಡ್ಸ್ ಟೆಂಪೋಗೆ ಢಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿಯೂ ಗಾಯವಾಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮಳೆ ಹಾನಿ ಮೂಲಸೌಕರ್ಯ ದುರಸ್ತಿಗೆ 500 ಕೋಟಿ ರೂ. ಬಿಡುಗಡೆ: ಸಿಎಂ ಬೊಮ್ಮಾಯಿ
ಒಂದು ಬಸ್ಸಿನ ಗಾಜು ಪುಡಿ ಪುಡಿಯಾಗಿದೆ. ಗೂಡ್ಸ್ ಲಾರಿಯ ಮುಂಭಾಗ ಜಖಂಗೊಂಡಿದ್ದು, ಉತ್ತರ ವಲಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನೀಡಿದ್ದಾರೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಅದೇ ರಸ್ತೆಯಲ್ಲಿ ಸಂಚರಿಸುವ ಬೇರೆ ಬಸ್ಸಿನಲ್ಲಿ ಪ್ರಯಾಣವನ್ನು ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.