Advertisement
ಕುಂಬ್ರ ಕಡೆಯಿಂದ ಬೆಳ್ಳಾರೆ ಕಡೆಗೆ ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪದ್ಯಾಣ ಗಣಪತಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ತ್ಯಾಗರಾಜನಗರ ಸಮೀಪ ನಿಯಂತ್ರಣ ತಪ್ಪಿ ರಸ್ತೆಯ ಇನ್ನೊಂದು ಬದಿಯ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪದ್ಯಾಣ ಗಣಪತಿ ಭಟ್ ಹಾಗೂ ಅವರ ಪತ್ನಿ ಶೀಲಶಂಕರಿ ಅವರ ತಲೆಗೆ ಗಾಯವಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.