ಮುಂಬಯಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಮತ್ತು ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವಾದಗಳೊಂದಿಗೆ ಆ. 14 ಮತ್ತು
15ರಂದು ಸಾಂತಾಕ್ರೂಜ್ ಪೂರ್ವದಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಧಾರ್ಮಿಕ ಕಾರ್ಯಕ್ರಮವಾಗಿ ಆ. 14ರಂದು ಸಂಜೆ 7ರಿಂದ ಶ್ರೀಕೃಷ್ಣ ಪ್ರತಿಷ್ಠಾನ ಮುಂಬಯಿಯ ಸಂಸ್ಥಾಪಕ ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಅವರಿಂದ ಹರಿಕಥೆ ಕಾರ್ಯಕ್ರಮ, ರಾತ್ರಿ 9.30ರಿಂದ ಶ್ರೀàಕೃಷ್ಣ ದೇವರಿಗೆ ತುಳಸೀ ಅರ್ಚನೆ, ಮಹಾಪೂಜೆ, ಕೃಷ್ಣಾರ್ಘÂ ಪ್ರದಾನ ನಡೆಯಲಿದೆ.
ಆ. 15ರಂದು ಸಂಜೆ 4.30ರಿಂದ ಮಠದ ವಠಾರ ಮತ್ತು ಪ್ರಭಾತ್ ಕಾಲೋನಿಯಲ್ಲಿ ವಿವಿಧ ವೇಷ ಭೂಷಣ, ವಾದ್ಯ ವೈವಿಧ್ಯಗಳ ನಾದದೊಂದಿಗೆ ಶ್ರೀಕೃಷ್ಣ ವಿಟ್ಲ ಪಿಂಡಿ ಉತ್ಸವ (ಮೆರವಣಿಗೆ) ನಡೆಯಲಿದೆ. ಸಂಜೆ 6ರಿಂದ ಪುಟಾಣಿಗಳಿಗೆ ಕೃಷ್ಣ ವೇಷ ಸ್ಪರ್ಧೆ, ಬಳಿಕ ಕು| ವಿಂದ್ಯಾ ಆಚಾರ್ಯ ಉಡುಪಿ ಅವರಿಂದ ಭರತ ನಾಟ್ಯ ಕಾರ್ಯಕ್ರಮ. ರಾತ್ರಿ 7.30 ರಿಂದ ವಿದ್ವಾನ್ ಮುಕುಂದ ಪೈ ಕಾರ್ಕಳ ಅವರಿಂದ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿ ಗಾಗಿ ಪೇಜಾವರ ಮಠದ (26126614) ಕಚೇರಿಯನ್ನು ಸಂಪರ್ಕಿಸಬಹುದು.
ಈ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ನಾಡಿನ ಸಮಸ್ತ ಭಕ್ತಾಭಿಮಾನಿಗಳು ಸಹಭಾಗಿ ಗಳಾಗಿ ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ವಿಶ್ವಸ್ತ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ಪ್ರಕಾಶ ಆಚಾರ್ಯ ರಾಮಕುಂಜ, ರಾಮದಾಸ ಉಪಾ ಧ್ಯಾಯ ರೆಂಜಾಳ, ಹರಿ ಭಟ್, ನಿರಂಜನ್ ಗೋಗೆr ಪ್ರಕಟನೆಯಲ್ಲಿ ತಿಳಿಸಿದ್ದಾರೆ.