Advertisement
9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು.
ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅತ್ಯಮೋಘ ಶತಕಗಳನ್ನು ಸಿಡಿಸಿ ಭಾರತದ ಬ್ಯಾಟಿಂಗ್ ಬಲ ಸಾಬೀತುಪಡಿಸಿದ್ದಾರೆ. ಭಾರತ 50 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್ ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು.ನಾಯಕ ರೋಹಿತ್ ಶರ್ಮಾ 56 ರನ್ ಶುಭಮನ್ ಗಿಲ್ 58 ರನ್ ಗಳಿಸಿ ಔಟಾಗಿದ್ದರು. ಕೊಹ್ಲಿ 122 ರನ್ ಗಳಿಸಿ ಅಜೇಯರಾಗಿ ಉಳಿದರು.93 ಎಸೆತಗಳಲ್ಲಿ ಆಕರ್ಷಕ 9 ಬೌಂಡರಿ ಮತ್ತು 3 ಸಿಕ್ಸರ್ ಅವರ ಇನ್ನಿಂಗ್ಸ್ ನ ಆಕರ್ಷಣೆಯಾಗಿತ್ತು. ಜವಾಬ್ದಾರಿಯುತ ಆಟವಾಡಿದ ರಾಹುಲ್ ಅಜೇಯ 111 ರನ್ ಗಳಿಸಿದರು.106 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಅವರ ಆಟದ ಆಕರ್ಷಣೆಯಾಗಿತ್ತು. 3 ನೇ ವಿಕೆಟ್ ಗೆ ಇಬ್ಬರು 233 ರನ್ ಜತೆಯಾಟವಾಡಿದ್ದು ಇದು ಏಷ್ಯಾ ಕಪ್ ಇತಿಹಾಸದಲ್ಲಿ ಭಾರತದ ಅತೀ ದೊಡ್ಡ ಜತೆಯಾಟವಾಗಿದೆ.
Related Articles
Advertisement