Advertisement

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್‌

06:40 AM Dec 28, 2017 | Team Udayavani |

ಜಮ್ಮು: ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರು ಸರ್ಜಿಕಲ್‌ ಸ್ಟ್ರೈಕ್‌ ಮಾದರಿಯ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು-ಕಾಶ್ಮೀರದ ರಜೌರಿ ವಲಯದಲ್ಲಿ ಪಾಕ್‌ ಪಡೆ ಮಂಗಳವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರೂ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಸುಮಾರು 4 ಗಂಟೆಗಳ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next