Advertisement

ಪಾಕ್ ಬೇಡಿಕೆ ತಳ್ಳಿಹಾಕಿದ ವಿಶ್ವಸಂಸ್ಥೆ; ಮಾತುಕತೆ ಮೂಲಕ ಕಾಶ್ಮೀರ ಸಮಸ್ಯೆ ಬಗೆಹರಿಸಿಕೊಳ್ಳಿ

09:12 AM Sep 12, 2019 | Nagendra Trasi |

ಜಿನಿವಾ:ಜಮ್ಮು-ಕಾಶ್ಮೀರದ ವಿಚಾರದಲ್ಲಿ ಉಭಯ ದೇಶಗಳ ನಡುವೆ ಯಾವುದೇ ರಾಜಕೀಯ ಬಿಕ್ಕಟ್ಟಿಗೆ ಅವಕಾಶ ನೀಡಬಾರದು ಎಂದು ಕಳಕಳಿ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ, ಕಾಶ್ಮೀರದ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನ ಮಾತುಕತೆಯ ಮೂಲಕವೇ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದೆ.

Advertisement

ಸ್ವಿಜರ್ಲೆಂಡ್ ನ ರಾಜಧಾನಿ ಜಿನಿವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ 42ನೇ ಸಮ್ಮೇಳನದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೊ ಗ್ಯುಟೇರಸ್ ಈ ಹೇಳಿಕೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ಕಾಶ್ಮೀರದ ವಿಚಾರದಲ್ಲಿ ಮೂರನೇ ರಾಷ್ಟ್ರ ಮಧ್ಯಪ್ರವೇಶಿಸಬೇಕೆಂಬ ಪಾಕಿಸ್ತಾನದ ಬೇಡಿಕೆಯನ್ನು ವಿಶ್ವಸಂಸ್ಥೆ ಸಾರಸಗಟಾಗಿ ತಳ್ಳಿಹಾಕಿದ್ದು, ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಭಾರತದ ಜತೆ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕೆಂದು ಸೂಚಿಸಿರುವುದಾಗಿ ವರದಿ ವಿವರಿಸಿದೆ.

ಇತ್ತೀಚೆಗೆ ಫ್ರಾನ್ಸ್ ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಗ್ಯುಟೇರಸ್ ಭೇಟಿಯಾಗಿದ್ದರು. ಅಲ್ಲದೇ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖೂರೇಶಿ ಜತೆಗೂ ಮಾತುಕತೆ ನಡೆಸಿದ್ದರು ಎಂದು ವಿಶ್ವಸಂಸ್ಥೆಯ ಮುಖ್ಯ ವಕ್ತಾರ ಸ್ಟೇಫನ್ ಡ್ಯುಜಾರ್ರಿಕ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next