Advertisement

ಜಮ್ಮು-ಕಾಶ್ಮೀರ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಪ್ರಚೋದನಾಕಾರಿ ಹೇಳಿಕೆಗೆ ಭಾರತ ಆಕ್ರೋಶ

09:28 AM Aug 30, 2019 | Nagendra Trasi |

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಪಾಕಿಸ್ತಾನದ ಮುಖಂಡರು ನೀಡುತ್ತಿರುವ ಅತೀ ಬೇಜವಾಬ್ದಾರಿ ಹೇಳಿಕೆಯನ್ನು ಭಾರತ ತೀವ್ರವಾಗಿ ಖಂಡಿಸುವುದಾಗಿ ಹೇಳಿದೆ.

Advertisement

ಪಾಕಿಸ್ತಾನದ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಭಾರತದಲ್ಲಿ ಗಲಭೆ ಭುಗಿಲೇಳುವಂತೆ ಹುನ್ನಾರ ನಡೆಸುತ್ತಿದ್ದಾರೆ. ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುತ್ತಿರುವ ಪಾಕಿಸ್ತಾನ ಮುಖಂಡರ ಹೇಳಿಕೆಯನ್ನು ಬಲವಾಗಿ ವಿರೋಧಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜಿಹಾದ್ ಗೆ ಕರೆ, ಭಾರತದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವಂತಹ ಪಾಕಿಸ್ತಾನದ ಹೇಳಿಕೆಗಳು ಬೇಜವಾಬ್ದಾರಿಯುತವಾಗಿದೆ ಎಂದು ಆಕ್ರೊಶ ವ್ಯಕ್ತಪಡಿಸಿದೆ.

ರವೀಶ್ ಕುಮಾರ್ ಅವರು ಪಾಕಿಸ್ತಾನದ ಯಾವುದೇ ನಾಯಕರ ಹೆಸರನ್ನು ಉಲ್ಲೇಖಿಸಿಲ್ಲ. ಜಮ್ಮು-ಕಾಶ್ಮೀರದ ವಿಚಾರದಲ್ಲಿ ಕಾಲುಕೆದರಿ ಜಗಳಕ್ಕಿಳಿಯುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇತ್ತೀಚೆಗೆ ಎರಡು ದೇಶಗಳ ನಡುವೆ ಅಣ್ವಸ್ತ್ರ ಯುದ್ಧ ನಡೆಯಬಹುದು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದನ್ನು ಗಮನಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next