Advertisement

Elections: ಹಿಂಸಾಚಾರ, ಆರ್ಥಿಕ ಬಿಕ್ಕಟ್ಟಿನ ನಡುವೆ ಪಾಕ್ ನಲ್ಲಿ ಇಂದು ಸಾರ್ವತ್ರಿಕ ಚುನಾವಣೆ

08:43 AM Feb 08, 2024 | Team Udayavani |

ಇಸ್ಲಾಮಾಬಾದ್ : ಹಿಂಸಾಚಾರ, ಭಯೋತ್ಪಾದಕ ದಾಳಿಗಳ ನಡುವೆ ಆರ್ಥಿಕ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿರುವ ಪಾಕಿಸ್ತಾನದಲ್ಲಿ ಇಂದು (ಗುರುವಾರ) ಸುಮಾರು 12.85 ಕೋಟಿ ಜನರು ಹೊಸ ಸರ್ಕಾರ ರಚಿಸಲು ಮತ ಚಲಾಯಿಸಲಿದ್ದಾರೆ. ಚುನಾವಣೆಯನ್ನು ಸುರಕ್ಷಿತವಾಗಿ ನಡೆಸಲು ದೇಶಾದ್ಯಂತ ಸುಮಾರು ಆರೂವರೆ ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Advertisement

ಮುಂಚೂಣಿಯಲ್ಲಿರುವ ಪಕ್ಷದ ನಾಯಕರಾದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಪ್ರಬಲ ಸೇನೆಯು ಬೆಂಬಲಿಸುತ್ತದೆ ಎಂದು ನಂಬಲಾಗಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪ್ರಸ್ತುತ ಜೈಲಿನಲ್ಲಿರುವುದರಿಂದ, ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ.

ಈ ಮೂರು ಪಕ್ಷಗಳ ನಡುವೆ ಪೈಪೋಟಿ
ಸಾರ್ವತ್ರಿಕ ಚುನಾವಣೆಯಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್), ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮತ್ತು ಬಿಲಾವಲ್ ಭುಟ್ಟೊ ಜರ್ದಾರಿ ನೇತೃತ್ವದ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ನಡುವೆ ಪೈಪೋಟಿ ಏರ್ಪಟ್ಟಿದೆ. ಆದರೆ, ಮಾಜಿ ಪ್ರಧಾನಿ ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ಪಕ್ಷಕ್ಕೆ ಹೆಚ್ಚಿನ ಬೆಂಬಲ ಇರುವುದರಿಂದ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಹೊಂದಿದೆ.

12 ಕೋಟಿಗೂ ಹೆಚ್ಚು ಮತದಾರರು:
ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ ಇಂದು (ಗುರುವಾರ) ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ರಾಷ್ಟ್ರೀಯ ಅಸೆಂಬ್ಲಿಗಾಗಿ ಒಟ್ಟು 12,85,85,760 ನೋಂದಾಯಿತ ಮತದಾರರು 5,121 ಅಭ್ಯರ್ಥಿಗಳಿಗೆ ಮತ ಚಲಾಯಿಸಲಿದ್ದಾರೆ ಎಂದು ಹೇಳಲಾಗಿದೆ, ಅಭ್ಯರ್ಥಿಗಳ ಪೈಕಿ 4,807 ಪುರುಷರು, 570 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳಿದ್ದಾರೆ.

ಅದೇ ರೀತಿ ನಾಲ್ಕು ಪ್ರಾಂತೀಯ ವಿಧಾನಸಭೆಗಳಿಗೆ 12,695 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಾಕಿಸ್ತಾನದ ಒಟ್ಟು 336 ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಲ್ಲಿ 266 ಸ್ಥಾನಗಳಿಗೆ ನೇರ ಚುನಾವಣೆಗಳು ನಡೆಯುತ್ತವೆ. ಆದರೆ ಬಜ್‌ಪುರ ಕ್ಷೇತ್ರದಲ್ಲಿ ಅಭ್ಯರ್ಥಿಯೊಬ್ಬರ ಹತ್ಯೆಯ ನಂತರ ಮತದಾನ ಮುಂದೂಡಲ್ಪಟ್ಟ ಕಾರಣ 265 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ.

Advertisement

ಇದನ್ನೂ ಓದಿ: Daily Horoscope:ಎಂತಹ ಕಠಿನ ಪರೀಕ್ಷೆಗಳು ಎದುರಾದರೂ ಜಯಿಸುವಿರಿ,ಉದ್ಯೋಗ ಸ್ಥಾನದಲ್ಲಿ ಹರ್ಷ

Advertisement

Udayavani is now on Telegram. Click here to join our channel and stay updated with the latest news.

Next