ದುಬಾೖ: ಏಷ್ಯಾ ಕಪ್ ಕ್ರಿಕೆಟ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ನಡುವಿನ ಭಾನುವಾರ ನಡೆಯುತ್ತಿರುವ ದ್ವಿತೀಯ ಸುತ್ತಿನ ಕಾದಾಟದಲ್ಲಿ ಟಾಸ್ ಗೆದ್ದ ಪಾಕಿಸ್ಥಾನ ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿದೆ.
ಭಾರತ-ಪಾಕಿಸ್ಥಾನ ನಡುವೆ ಕಳೆದ ರವಿವಾರ ನಡೆದ “ಎ’ ವಿಭಾಗದ ಲೀಗ್ ಪಂದ್ಯದಲ್ಲಿ 148 ರನ್ ಗುರಿ ಪಡೆದ ರೋಹಿತ್ ಶರ್ಮ ಬಳಗ 5 ವಿಕೆಟ್ ಗೆಲುವು ಸಾಧಿಸಿತ್ತು. “ಸೂಪರ್ ಫೋರ್’ ಮುಖಾಮುಖಿಯಲ್ಲಿ ಸೇಡು ತೀರಿಸಿಕೊಳ್ಳಲು ಪಾಕ್ ಹವಣಿಸುತ್ತಿದೆ.
ತಂಡಗಳು
ಭಾರತ : ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೀ), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಪಾಕಿಸ್ಥಾನ : ಮೊಹಮ್ಮದ್ ರಿಜ್ವಾನ್ (ವಿಕೀ), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ