Advertisement

ಪಾಕಿಸ್ಥಾನದ ಬೋಲನ್‌ನಲ್ಲಿ ಬಾಂಬ್ ದಾಳಿ; ಕನಿಷ್ಠ ಒಂಬತ್ತು ಪೊಲೀಸರು ಬಲಿ

03:47 PM Mar 06, 2023 | Team Udayavani |

ಇಸ್ಲಾಮಾಬಾದ್ : ಪಾಕಿಸ್ಥಾನದ ಬೋಲನ್‌ನಲ್ಲಿ ಸೋಮವಾರ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ ಒಂಬತ್ತು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ಬೋಲನ್ ನೈಋತ್ಯ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ಥಾನ್ ಪ್ರದೇಶದಲ್ಲಿದೆ.

Advertisement

ಮಾಧ್ಯಮಗಳಿಗೆ ವಿವರಗಳನ್ನು ನೀಡಿದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಮಹಮೂದ್ ನೋಟ್ಜೈ, ಸಿಬಿ ಮತ್ತು ಕಚ್ಚಿ ಗಡಿಗೆ ಹೊಂದಿಕೊಂಡಿರುವ ಪ್ರದೇಶವಾದ ಕಾಂಬ್ರಿ ಸೇತುವೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದು ಆತ್ಮಹತ್ಯಾ ಬಾಂಬ್ ದಾಳಿ ಎಂದು ಶಂಕಿಸಲಾಗುತ್ತಿದೆ ಆದರೆ ಅಧಿಕಾರಿಗಳು ದಾಳಿಯ ನಿಖರ ಸ್ವರೂಪವನ್ನು ತನಿಖೆ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಭದ್ರತಾ ಸಿಬಂದಿ ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ನೋಟ್ಜೈ ಹೇಳಿದ್ದಾರೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯ ಮತ್ತು ಅಫ್ಘಾನಿಸ್ಥಾನದ ಗಡಿ ಪ್ರದೇಶಗಳ ಮೇಲೆ ದಾಳಿಯನ್ನು ತೀವ್ರಗೊಳಿಸಿರುವ ಕಾನೂನುಬಾಹಿರ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ಥಾನ (ಟಿಟಿಪಿ) ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next