ನವದೆಹಲಿ:ಭಾರತೀಯ ವಾಯುಪಡೆ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದ್ದ ಘಟನೆಯ ಬೆನ್ನಲ್ಲೇ ಬುಧವಾರ ಭಾರತದ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಭಾರತದೊಳಗೆ ನುಗ್ಗಿದ್ದ 3 ಪಾಕಿಸ್ತಾನದ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದ್ದು, ಜಮ್ಮು-ಕಾಶ್ಮೀರದಲ್ಲಿ ಎಲ್ಲಾ ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದೆ ಎಂದು ವರದಿ ಹೇಳಿದೆ.
ಎಲ್ ಒಸಿ ಬಳಿಯ ವಾಯುಸೀಮೆಯನ್ನು ಉಲ್ಲಂಘಿಸಿ ಪಾಕಿಸ್ತಾನದ ಮೂರು ಜೆಟ್ ವಿಮಾನಗಳು ದಾಳಿ ನಡೆಸಲು ವಿಫಲ ಪ್ರಯತ್ನ ನಡೆಸಿರುವುದಾಗಿ ಪಿಟಿಐ ವರದಿ ಮಾಡಿದೆ. ಏತನ್ಮಧ್ಯೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಜಮ್ಮು-ಕಾಶ್ಮೀರದಲ್ಲಿ ಎಲ್ಲಾ ವಿಮಾನ ನಿಲ್ದಾಣ ಸ್ಥಗಿತಗೊಳಿಸಲಾಗಿದ್ದು, ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದ್ದು, ಎಲ್ಲಾ ವಿಮಾನಗಳು ದೆಹಲಿಗೆ ವಾಪಸ್ ಆಗಿವೆ ಎಂದು ವರದಿ ವಿವರಿಸಿದೆ.