ಇಸ್ಲಾಮಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕಿಸ್ಥಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶುಕ್ರವಾರ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ 31 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಎಎನ್‌ಐ ಸುದ್ದಿ ಸಂಸ್ಥೆಯ ವರದಿಗಳ ಪ್ರಕಾರ, ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಎಲ್‌ಇಟಿ ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಯೀದ್‌ಗೆ 3,40,000 ರೂಪಾಯಿ ದಂಡವನ್ನು ವಿಧಿಸಿದೆ.
ಭಾರತದ ಸಂಸತ್ತಿನ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಎಂದು ಹೇಳಲಾದ ಹಫೀಜ್ ಸಯೀದ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಅಧಿಕಾರಿಗಳಿಗೆ ಆದೇಶಿಸಿದೆ.
ಎಲ್‌ಇಟಿ ಸಹ ಸಂಸ್ಥಾಪಕ ಮತ್ತು ಜಮಾತ್-ಉದ್-ದವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಯೀದ್, ಪಾಕ್ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸ್ಥಾಪಕ ಮೌಲಾನಾ ಮಸೂದ್ ಅಜರ್ ಮತ್ತು ಮುಂಬೈ ದಾಳಿಯ ಪ್ರಮುಖ ಅಪರಾಧಿ ಝಕಿ-ಉರ್-ರೆಹಮಾನ್ ಲಖ್ವಿ ಭಾರತದ ಮೋಸ್ಟ್ ವಾಂಟೆಡ್ ಉಗ್ರರಾಗಿದ್ದಾರೆ.