ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಹೊರಡಿಸಿದ್ದ ಜಾಮೀನುರಹಿತ ಬಂಧನ ವಾರಂಟ್ ಅನ್ನು ಇಸ್ಲಾಮಾಬಾದ್ ಹೈಕೋರ್ಟ್ ಮಾ.18ರವರೆಗೆ ಅಮಾನತುಗೊಳಿಸಿದೆ.
ಇದೇ ವೇಳೆ ನ್ಯಾಯಾಲಯದ ಎದುರು ಖುದ್ದಾಗಿ ಹಾಜರಾಗುವಂತೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್‌ಗೆ ಸೂಚಿಸಿದೆ. ಶನಿವಾರ ನ್ಯಾಯಾಲಯಕ್ಕೆ ಆಗಮಿಸಲು ಅವರಿಗೆ ಬಿಗಿ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಸೂಚಿಸಿದೆ.
ತೋಶಖಾನ ಭ್ರಷ್ಟಾಚಾರ ಪ್ರಕರಣ ಸಂಬಂಧ ಕೋರ್ಟ್ ಫೆ.28ರಂದು ಬಂಧನ ವಾರಂಟ್ ಹೊರಡಿಸಿತ್ತು. ಬಂಧನ ಖಂಡಿಸಿ ಪಿಟಿಐ ಕಾರ್ಯರ್ತರು ಇಮ್ರಾನ್ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾರ್ಯರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು.