Advertisement

3ನೇ ಬಾರಿಯೂ ಪ್ರಧಾನಿ ಮೋದಿಗೆ ವಾಯು ಮಾರ್ಗ ಬಳಕೆಗೆ ಪಾಕ್ ನಕಾರ

09:38 AM Oct 29, 2019 | Team Udayavani |

ಇಸ್ಲಾಮಾಬಾದ್:ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿರುವುದು ಮುಂದುವರಿದಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪಾಕಿಸ್ತಾನದ ವಾಯುಮಾರ್ಗದ ಮೂಲಕ ಅವರ ವಿಮಾನ ಹಾರಾಟಕ್ಕೆ ಪಾಕಿಸ್ತಾನ ನಿರಾಕರಿಸಿದೆ.

Advertisement

ಜಮ್ಮು-ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಉಭಯ ದೇಶಗಳ ನಡುವಿನ ಶೀತಲ ಸಮರ ಮುಂದುವರಿದಿತ್ತು. ಈ ಹಿನ್ನೆಲೆಯಲ್ಲಿ ಪಾಕ್ ವಾಯುಮಾರ್ಗದ ಮೂಲಕ ಪ್ರಧಾನಿ ನರೇಂದ್ರ
ಮೋದಿ ಅವರ ವಿಮಾನ ಹಾರಾಟಕ್ಕೆ ಅನುಮತಿ ನಿರಾಕರಿಸುತ್ತಿರುವುದು ಇದು ಮೂರನೇಯ ಬಾರಿಯಾಗಿದೆ ಎಂದು ವರದಿ ತಿಳಿಸಿದೆ.

ಕಳೆದ ತಿಂಗಳು ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ವಾಯುಮಾರ್ಗ ಬಳಸಲು ಅನುಮತಿ ಕೇಳಿದ್ದ ಮನವಿಯನ್ನು ನಿರಾಕರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next