ಇಸ್ಲಾಮಾಬಾದ್: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಉಗ್ರ ಹಫೀಜ್ ಸಯೀದ್ ಪುತ್ರ ತಲ್ಹಾ ಹಫೀಜ್ ಸಯೀದ್ ಲಾಹೋರ್ ಕ್ಷೇತ್ರದಲ್ಲಿ ಪರಾಜಯಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Pak Election Results: ಜೈಲಿನಲ್ಲಿರುವ ಇಮ್ರಾನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳ ಮೇಲುಗೈ!
ಏತನ್ಮಧ್ಯೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತ ಪಕ್ಷ ಪಾಕ್ ನ ಸಾರ್ವತ್ರಿಕ ಚುನಾವಣೆಯಲ್ಲಿ ಜಯ ಸಾಧಿಸಿರುವುದಾಗಿ ಹೇಳಿಕೊಂಡಿದೆ.
ಚುನಾವಣೆಯಲ್ಲಿ ಪಿಎಂಎಲ್ ಎನ್ ವರಿಷ್ಠ, ಮಾಜಿ ಪ್ರಧಾನಿ ನವಾಜ್ ಷರೀಫ್ ಸೋಲನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ್ ತೇಹ್ರಿಕ್ ಇ ಇನ್ಸಾಫ್ (ಪಿಟಿಐ) ಪಕ್ಷ ಬಿಡುಗಡೆಗೊಳಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.
ಆದರೆ ಪಿಟಿಐ ಪಕ್ಷದ ಬೇಡಿಕೆಯನ್ನು ತಿರಸ್ಕರಿಸಿರುವ ಪಿಎಂಎಲ್ ಎನ್, ಪಾಕಿಸ್ತಾನದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಪಕ್ಷ ಜಯಗಳಿಸಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದೆ. 265 ಸದಸ್ಯ ಬಲದ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 133 ಸ್ಥಾನಗಳ ಅಗತ್ಯವಿದೆ ಎಂದು ವರದಿ ವಿವರಿಸಿದೆ.