ಇಸ್ಲಾಮಾಬಾದ್: ಗೂಢಚರ್ಯೆ, ಭಯೋತ್ಪಾದನೆ ನಡೆಸಿರುವ ಆರೋಪದಲ್ಲಿ ಜೈಲಿನಲ್ಲಿರುವ ಭಾರತದ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ಸೇನಾ ಕೋರ್ಟ್ ವಿಧಿಸಿರುವ ಮರಣದಂಡನೆ ಶಿಕ್ಷೆಯ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಪಾಕಿಸ್ತಾನ ಸಂಸತ್ ನ ಜಂಟಿ ಅಧಿವೇಶನ ಮಸೂದೆಯನ್ನು ಬುಧವಾರ(ನವೆಂಬರ್ 17) ಅಂಗೀಕರಿಸಿದೆ.
ಇದನ್ನೂ ಓದಿ:ಎಡಮಂಗಲ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ನಾಯಿ; ಸಹ ಸವಾರ ಸಾವು
ಪಾಕಿಸ್ತಾನ ಸೇನಾ ನ್ಯಾಯಾಲಯ ವಿಧಿಸಿರುವ ಶಿಕ್ಷೆಯ ಕುರಿತು ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವ ಮಸೂದೆಗೆ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಅಂಗೀಕಾರ ನೀಡಿತ್ತು.
ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ 2020ರಲ್ಲಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅಸೆಂಬ್ಲಿಯಲ್ಲಿ ಸುಗ್ರೀವಾಜ್ಞೆ ಮಂಡಿಸಿತ್ತು. ಅಷ್ಟೇ ಅಲ್ಲ ಜಾಧವ್ ಗೆ ಅಂತಾರಾಷ್ಟ್ರೀಯ ಕೋರ್ಟ್ ರಾಜತಾಂತ್ರಿಕ ನೆರವನ್ನು ಕೊಟ್ಟಿತ್ತು.
ಭಾರತೀಯ ನೌಕಾ ಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ (50) ಅವರು ಗೂಢಚರ್ಯೆ, ಭಯೋತ್ಪಾದನೆ ನಡೆಸಿದ ಆರೋಪದಡಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ 2017ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿತ್ತು.