Advertisement
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಕಿಸ್ಥಾನ ಪ್ರಧಾನ ಪ್ರಧಾನಿಯರ ಆಪ್ತ ವೈದ್ಯ ಡಾ| ಫೈಸಲ್ ಸುಲ್ತಾನ್ ಶೀಘ್ರವೇ ಇಮ್ರಾನ್ ಖಾನ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರಿಗೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆ ನಡೆಸಿ ಪ್ರತ್ಯೇಕವಾಗಿ ಇರುವ ಬಗ್ಗೆ ಸೂಚಿಸುವುದಾಗಿ ಹೇಳಿದ್ದಾರೆ. ಹೀಗಾಗಿ, ಖಾನ್ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆಯೇ, ಅಧಿಕೃತ ನಿವಾಸದಿಂದಲೇ ಸರಕಾರಿ ಕರ್ತವ್ಯ ನಿರ್ವಹಿಸಲಿದ್ದಾರೆಯೇ ಎಂಬ ವಿಚಾರ ಆಪ್ತ ವೈದ್ಯ ತಪಾಸಣೆ ನಡೆಸಿದ ಬಳಿಕ ಗೊತ್ತಾಗಲಿದೆ. ಸದ್ಯ ಅವರು ಎಂದಿನಂತೆಯೇ ಕಾರ್ಯನಿರ್ವಹಿಸಿದ್ದಾರೆ ಮತ್ತು ಸಂಪುಟ ಸಭೆಯನ್ನೂ ನಡೆಸಿದ್ದಾರೆ. ಪಾಕಿಸ್ಥಾನದಲ್ಲಿ ಸೋಂಕಿನಿಂದಾಗಿ 192ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ ಮತ್ತು 9 ಸಾವಿರಕ್ಕೂ ಅಧಿಕ ಮಂದಿಗೆ ಪ್ರಕರಣ ದೃಢಪಟ್ಟಿದೆ. ಕಳೆದ ವಾರ, ಪೈಸಲ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಕೋವಿಡ್ ಸಂತ್ರಸ್ತರ ಪರಿಹಾರ ನಿಧಿಗೆ ದೇಣಿಗೆ ನೀಡಿ ಬಂದಿದ್ದರು. ಈ ಬೆನ್ನಲ್ಲೇ ಅಸ್ವಸ್ಥರಾಗಿದ್ದ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ಇದೇ ವೇಳೆ ರಂಜಾನ್ ವೇಳೆ ಮಸೀದಿಗಳಿಗೆ 50 ವರ್ಷ ಮೇಲ್ಪಟ್ಟವರು, ಅಪ್ರಾಪ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇಂಥ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ. Advertisement
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೂ ಕೋವಿಡ್ ಆತಂಕ
12:50 PM Apr 22, 2020 | sudhir |
Advertisement
Udayavani is now on Telegram. Click here to join our channel and stay updated with the latest news.