ಇಸ್ಲಾಮಾಬಾದ್: ಪಾಕಿಸ್ಥಾನದ ಪಂಜಾಬ್ ಪ್ರಾಂತದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿವೆ.
Advertisement
ಅದರಲ್ಲೂ ಹಿಂದೂ ಹೆಣ್ಣುಮಕ್ಕಳು ಕಾಮುಕರ ಟಾರ್ಗೆಟ್ ಆಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರಾಂತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. “ಪಂಜಾಬ್ ಪ್ರಾಂತದಲ್ಲಿ ದಿನಕ್ಕೆ ಸರಾಸರಿ 4-5 ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಇದನ್ನು ತಡೆಗಟ್ಟಲು ಕಠಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಪ್ರಾಂತದ ಗೃಹ ಸಚಿವರಾಗಿರುವ ಅಟ್ಟಾ ತರರ್ ರವಿವಾರ ತಿಳಿಸಿದ್ದಾರೆ.