Advertisement

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

01:11 PM Sep 19, 2024 | Team Udayavani |

ಇಸ್ಲಾಮಾಬಾದ್:‌ ಜಮ್ಮು-ಕಾಶ್ಮೀರ(Jammu and Kashmir) ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ನೆರೆಯ ಪಾಕಿಸ್ತಾನ ಮತ್ತೊಮ್ಮೆ ಭಾರತದ ಆಡಳಿತದ ವಿಚಾರದಲ್ಲಿ ಮೂಗುತೂರಿಸಿದೆ.

Advertisement

ಜಮ್ಮು-ಕಾಶ್ಮೀರದ ಕಲಂ 370 ಅನ್ನು ಪುನರ್‌ ಜಾರಿಗೊಳಿಸುವ ಬಗ್ಗೆ ಪಾಕ್‌ ಸರ್ಕಾರ ಮತ್ತು ಕಾಂಗ್ರೆಸ್-ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿ ಒಂದೇ ನಿಲುವು ಹೊಂದಿರುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಅಸೀಫ್‌ ಸಂದರ್ಶನವೊಂದರಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಹಂತದ 24 ಕ್ಷೇತ್ರಗಳಲ್ಲಿ ಮತದಾನ ನಡೆದ ನಂತರ ಖ್ವಾಜಾ ಅಸೀಫ್‌ ಈ ಹೇಳಿಕೆ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.

ಜಿಯೋ(Geo News) ನ್ಯೂಸ್‌ ಚಾನೆಲ್‌ ಗೆ ನೀಡಿದ ಸಂದರ್ಶನದಲ್ಲಿ ಖ್ವಾಜಾ, ಕಣಿವೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಬಲಿಷ್ಠವಾಗಿದ್ದು, ಜಮ್ಮು-ಕಾಶ್ಮೀರದ ಅಧಿಕಾರದ ಗದ್ದುಗೆ ಹಿಡಿಯುವಂತೆ ಮಾಡಲು ಜನರಿಗೆ ಉತ್ತಮ ಅವಕಾಶ ಇದೆ ಎಂದು ತಿಳಿಸಿದ್ದಾರೆ.

Advertisement

ಜಮ್ಮು-ಕಾಶ್ಮೀರದ 370ನೇ ವಿಧಿ ಮತ್ತು 35ಎ ಅನ್ನು ಪುನರ್‌ ಜಾರಿಗೊಳಿಸುವ ವಿಚಾರದಲ್ಲಿ ಪಾಕಿಸ್ತಾನ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಒಂದೇ ನಿಲುವು ಹೊಂದಿರುವುದಾಗಿ ಸಚಿವ ಖ್ವಾಜಾ ಬೆಂಬಲ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಸೆ.18ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.59ರಷ್ಟು ಮತದಾನವಾಗಿತ್ತು. ಕಿಸ್ತ್ವಾರ್‌ ನಲ್ಲಿ ಶೇ.77ರಷ್ಟು, ಪುಲ್ವಾಮಾದಲ್ಲಿ ಕಡಿಮೆ (ಶೇ.46) ಮತದಾನವಾಗಿರುವುದಾಗಿ ವರದಿ ವಿವರಿಸಿದೆ.

ಸೆಪ್ಟೆಂಬರ್‌ 25ರಂದು ಜಮ್ಮು-ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ ಹಾಗೂ ಅಕ್ಟೋಬರ್‌ 1ರಂದು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್‌ 8ರಂದು ಫಲಿತಾಂಶ ಪ್ರಕಟವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next