Advertisement

Pak ಮಿಲಿಟರಿ ಕಾಯ್ದೆಗೆ ತಿದ್ದುಪಡಿ;ಸಿವಿಲ್ ಕೋರ್ಟ್ ನಲ್ಲಿ ಜಾಧವ್ ಮೇಲ್ಮನವಿ ಸಲ್ಲಿಕೆ ಅವಕಾಶ

11:15 AM Nov 14, 2019 | Nagendra Trasi |

ಇಸ್ಲಾಮಾಬಾದ್: ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ಸರ್ಕಾರ ಶೀಘ್ರವೇ ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ನಿರ್ಧರಿಸಿದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ. ಇದರಿಂದಾಗಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ತನ್ನ ವಿರುದ್ಧದ ಆರೋಪವನ್ನು ಸಿವಿಲ್ ಕೋರ್ಟ್ ನಲ್ಲಿ ಪ್ರಶ್ನಿಸಬಹುದಾಗಿದೆ.

Advertisement

ಈ ಬೆಳವಣಿಗೆ ಕುರಿತು ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರ ಪ್ರಕಾರ, ಪಾಕಿಸ್ತಾನ ಸರ್ಕಾರ ಸೇನಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ. ಇದರಿಂದ ಕುಲಭೂಷಣ್ ಜಾಧವ್ ತಮ್ಮ ಶಿಕ್ಷೆಯ ಬಗ್ಗೆ ಸಿವಿಲ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪಾಕ್ ಮಿಲಿಟರಿ ಕೋರ್ಟ್ ನ ಪ್ರಸ್ತುತ ಕಾಯ್ದೆಯ ಪ್ರಕಾರ ನ್ಯಾಯಾಲಯದ ಶಿಕ್ಷೆಗೆ ಗುರಿಯಾದ ವ್ಯಕ್ತಿಗಳು ಸಿವಿಲ್ (ನಾಗರಿಕ) ಕೋರ್ಟ್ ನಲ್ಲಿ ಪ್ರಶ್ನಿಸಲು ಅವಕಾಶ ಇರಲಿಲ್ಲವಾಗಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಭದ್ರತಾ ಪಡೆ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿತ್ತು. ಜಾಧವ್ ಗೂಢಚಾರ ಕೆಲಸದಲ್ಲಿ ತೊಡಗಿರುವುದಾಗಿ ಪಾಕ್ ಆರೋಪಿಸಿತ್ತು, ಬಳಿಕ ಮಿಲಿಟರಿ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಭಾರತ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಅಂತಾರಾಷ್ಟ್ರೀಯ ನ್ಯಾಯಾಲಯ, ಮರಣದಂಡನೆ ಶಿಕ್ಷೆ ತಡೆ ನೀಡಿ, ರಾಜತಾಂತ್ರಿಕ ನೆರವು ಕಲ್ಪಿಸಿಕೊಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next