Advertisement

ಜಮ್ಮು-ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕ್ ಪಡೆಯಿಂದ ದಾಳಿ, ಭಾರತೀಯ ಸೇನೆ ಪ್ರತಿದಾಳಿ

10:00 AM Nov 04, 2019 | Nagendra Trasi |

ನವದೆಹಲಿ: ಒಂದೆಡೆ ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಮೌಲ್ವಿ ಫಝ್ಲುರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಸೇನಾಪಡೆಗಳು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿವೆ.

Advertisement

ವರದಿಯ ಪ್ರಕಾರ, ಶನಿವಾರ ಬೆಳಗ್ಗೆ ಪೂಂಚ್ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾ ಪೋಸ್ಟ್ ಗಳನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನಾಪಡೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ವರದಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next