ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನಲ್ಲಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳಿಂದ ಪಾಕಿಸ್ತಾನ ಜಿಂದಾಬಾದ್ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು ಅದಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆದಿದ್ದ ಅಮೀರ್, ಬಾಸೀತ್, ತಾಲೀಬ್ ಎಂಬುವ ಕಾಶ್ಮೀರ ಮೂಲದ ವಿದ್ಯಾರ್ಥಿಗಳು.
ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕೆಎಲ್ಇ ತಾಂತ್ರಿಕ ವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾರ್ಥಿಗಳು.
ಘಟನೆ ಕುರಿತಂತೆ ಕೂಡಲೇ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಜರಂಗದಳದಿಂದ ಆಗ್ರಹಿಸಿದೆ.
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಮೂವರು ಜಮ್ಮು ಮತ್ತು ಕಾಶ್ಮಿರ ಮೂಲದ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಹಾಗೂ ಕೋಮು ಸೌಹಾರ್ದ ಕದಡಿದ ಪ್ರಕರಣ ದಾಖಲಿಸಿರುವುದಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಹೇಳಿಕೆ ನೀಡಿದ್ದರು.
ಕಠಿಣ ಕ್ರಮಕ್ಕೆ ಸೂಚನೆ :
ಹುಬ್ಬಳ್ಳಿ: ನಗರದ ಇಂಜಿನಿಯರಿಂಗ್ ನ ಮೂವರು ವಿದ್ಯಾರ್ಥಿಗಳಿಂದ ಪಾಕಿಸ್ತಾನ ಪರ ಘೋಷಣೆ ಹಿನ್ನೆಲೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ. ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.