ನವದೆಹಲಿ : ದೆಹಲಿಯ ಖಾನ್ ಮಾರ್ಕೆಟ್ ಪ್ರದೇಶದಲ್ಲಿ ಶನಿವಾರ(ಜ.23) ತಡ ರಾತ್ರಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ದೆಹಲಿ ಪೊಲೀಸರು ಭಾನುವಾರ (ಜ. 24) ಹೇಳಿದ್ದಾರೆ.
‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ದೂರು ಸ್ವೀಕರಿಸಿದ ಪೊಲೀಸರು ಘಟನೆಗೆ ಸಂಬಂಧಿಸಿದ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರನ್ನು ಇಂದು(ಜ.24) ಮುಂಜಾನೆ ತಮ್ಮ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ : ನನ್ನ ಅಪ್ಪನಿಗೆ 27 ಹೆಂಡತಿಯರು, 150 ಮಕ್ಕಳು : ಮೆರ್ಲಿನ್
ಖಾನ್ ಮಾರ್ಕೆಟ್ ಮೆಟ್ರೋ ನಿಲ್ದಾಣದ ಬಳಿ ಬೈಕ್ ರೇಸಿಂಗ್ ಮಾಡುತ್ತಿದ್ದ ಜನರ ಗುಂಪು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಿರುವ ಬಗ್ಗೆ ಪಿಸಿಆರ್ ಕರೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಘಲಕ್ ರಸ್ತೆಯ ಪೊಲೀಸ್ ಸ್ಟೇಷನ್ ಗೆ ಮುಂಜಾನೆ 1 ಗಂಟೆ ಸುಮಾರಿಗೆ ಪಿಸಿಆರ್ ಕರೆ ಬಂದಿದ್ದು, ಖಾನ್ ಮಾರ್ಕೆಟ್ ಮೆಟ್ರೋ ನಿಲ್ದಾಣದ ಬಳಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮಾಡುತ್ತಿರುವುದು ಕೆಲವರಿಗೆ ಕೇಳಿಬಂದಿದೆ ಎನ್ನಲಾಗುತ್ತಿದೆ. ವಿಚಾರಣಾ ಅಧಿಕಾರಿ ಸ್ಥಳಕ್ಕೆ ತಲುಪಿದಾಗ ಇಬ್ಬರು ಪುರುಷರು, ಮೂವರು ಮಹಿಳೆಯರು ಮತ್ತು ನೀಲಿ ಬಣ್ಣದ ಯುಲು ಬೈಕ್ ಗಳಲ್ಲಿ ಘಟನೆ ನಡೆದ ಸ್ಥಳದಲ್ಲಿದ್ದರು.
ಇನ್ನು, ಇಬ್ಬರನ್ನು ಈಗಾಗಲೇ ಅವರ ಕುಟುಂಬಗಳೊಂದಿಗೆ ವಿಚಾರಣೆ ನಡೆಸಲಾಗುತ್ತಿದೆ. ಹಾಗೂ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಶಶಿಕಲಾ ನಟರಾಜನ್ ಸಂಬಂಧಿ ಇಳವರಸಿಗೂ ಕೋವಿಡ್