Advertisement

ಗುಜರಾತ್ ಕರಾವಳಿ ಪ್ರದೇಶದಲ್ಲಿ ಪಾಕ್ ಬೋಟ್ ವಶಕ್ಕೆ, 200 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ

02:49 PM Sep 14, 2022 | Team Udayavani |

ಅಹಮದಾಬಾದ್: ಕರಾವಳಿ ಪಡೆ ಮತ್ತು ಗುಜರಾತ್ ನ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಬುಧವಾರ (ಸೆ.14) ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 200 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಪಾಕಿಸ್ತಾನಿ ಬೋಟ್ ಅನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಶಿರ್ವ ಗ್ರಾ.ಪಂ. ಅಧ್ಯಕ್ಷ ಗಾದಿ ಕೈ ತೆಕ್ಕೆಗೆ: ಅಧ್ಯಕ್ಷರಾಗಿ ರತನ್‌ ಕುಮಾರ್‌ ಶೆಟ್ಟಿ ಆಯ್ಕೆ

ಬೋಟ್ ನಲ್ಲಿ ಅಂದಾಜು 200 ಕೋಟಿ ರೂಪಾಯಿ ಮೌಲ್ಯದ 40 ಕೆಜಿ ಡ್ರಗ್ಸ್ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ. ಕಾರ್ಯಾಚರಣೆಯಲ್ಲಿ ಕರಾವಳಿ ಪಡೆಯ ಎರಡು ಸ್ಪೀಡ್ ಬೋಟ್ ಗಳನ್ನು ಬಳಸಿದ್ದು, ಗುಜರಾತ್ ನ ಜಾಖು ಕರಾವಳಿ ಪ್ರದೇಶದೊಳಕ್ಕೆ ಬಂದಿದ್ದ ಪಾಕಿಸ್ತಾನದ ಅಲ್ ತಯ್ಯಾಸಾ ಬೋಟ್ ಅನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.

ಆರು ಜನರು ಹಾಗೂ ಬೋಟ್ ಅನ್ನು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಕರಾವಳಿ ಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಕರಾವಳಿ ಪಡೆ ಮತ್ತು ಭಯೋತ್ಪಾದಕ ನಿಗ್ರಹ ದಳ ಡ್ರಗ್ ಕಳ್ಳಸಾಗಣೆಯನ್ನು ವಿಫಲಗೊಳಿಸಿತ್ತು.

2021ರ ಅಕ್ಟೋಬರ್ ನಲ್ಲಿ ಗುಜರಾತ್ ನ ಮುಂದ್ರಾ ಬಂದರು ಪ್ರದೇಶದಲ್ಲಿ 2,988 ಕೆಜಿಯಷ್ಟು ಹೆರಾಯಿನ್ ವಶಪಡಿಸಿಕೊಂಡಿದ್ದು, ಇದರ ಅಂದಾಜು ಮೊತ್ತ 21,000 ಕೋಟಿ ರೂಪಾಯಿ. ಇದು ಗುಜರಾತ್ ಕರಾವಳಿ ಪ್ರದೇಶದಲ್ಲಿ ವಶಪಡಿಸಿಕೊಂಡ ಅತೀ ದೊಡ್ಡ ಡ್ರಗ್ ಕಳ್ಳಸಾಗಣೆ ಪ್ರಕರಣಗಳಲ್ಲಿ ಒಂದಾಗಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next