Advertisement

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಮತ್ತೆ ವಾರಂಟ್‌

06:56 PM Feb 28, 2023 | Team Udayavani |

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಇಸ್ಲಾಮಾಬಾದ್‌ನ ಸ್ಥಳೀಯ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ. ಅವರು ಪ್ರಧಾನಿಯಾಗಿದ್ದ ವೇಳೆ ಸಿಕ್ಕಿದ್ದ ಉಡುಗೊರೆಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಕೋರ್ಟ್‌ ಈ ತೀರ್ಮಾನ ಕೈಗೊಂಡಿದೆ.

Advertisement

ಜಗತ್ತಿನಾದ್ಯಂತ ಸುದ್ದಿಯಾಗಿರುವ ಉಡುಗೊರೆಗಳ ಮಾರಾಟ ಕೇಸಿನಲ್ಲಿ ಪೊಲೀಸರು ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದರೆ, ಅದನ್ನು ಪರಿಶೀಲಿಸುವ ಸಂದರ್ಭದಲ್ಲಿ ಇಮ್ರಾನ್‌ ಖಾನ್‌ ಕೋರ್ಟ್‌ಗೆ ಹಾಜರಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಝಫ‌ರ್‌ ಇಕ್ಬಾಲ್‌ ಅವರು ಜಾಮೀನು ರಹಿತ ವಾರೆಂಟ್‌ ಹೊರಡಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಮಾ.7ರಂದು ನಿಗದಿಯಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next