Advertisement

ಭಾರತದ ಸುಖೋಯ್-30 ದಾಳಿಗೆ ಧರೆಗುರುಳಿದ ಪಾಕ್ ನ ಎಫ್ 16

08:14 AM Feb 27, 2019 | Sharanya Alva |

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ಬಳಿ ಭಾರತೀಯ ವಾಯುಗಡಿಯನ್ನು ಉಲ್ಲಂಘಿಸಿ ಒಳ ಬರಲು ಯತ್ನಿಸಿದ್ದ ಪಾಕಿಸ್ತಾನ ವಾಯುಪಡೆಯ ಎಫ್ 16 ವಿಮಾನವನ್ನು ಭಾರತದ ಸುಖೋಯ್ 30 ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ.

Advertisement

ಭಾರತದ ವಾಯುಗಡಿ ಉಲ್ಲಂಘಿಸಿ ಒಳ ಬರಲು ಪ್ರಯತ್ನಿಸಿದ್ದ ಪಾಕಿಸ್ತಾನ ವಾಯುಪಡೆಯ ಮೂರು ವಿಮಾನಗಳನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿರುವುದಾಗಿ ಈ ಮೊದಲು ಮಾಧ್ಯಮಗಳು ವರದಿ ಬಿತ್ತರಿಸಿದ್ದವು. ಇದೀಗ ರಕ್ಷಣಾ ಸಚಿವಾಲಯದ ಮೂಲಗಳ ಪ್ರಕಾರ, ಪಾಕಿಸ್ತಾನದ ವಾಯುಪಡೆ ವಿಮಾನ ಭಾರತದ ಗಡಿಯೊಳಗೆ ಬಂದಿದ್ದು, ಅದನ್ನು ಹೊಡೆದುರುಳಿಸಿರುವುದಾಗಿ ಹೇಳಿದೆ.

ಮಂಗಳವಾರ ಮುಂಜಾನೆ ಭಾರತೀಯ ವಾಯುಪಡೆಯ ಮಿರಾಜ್ 2000 ವಿಮಾನ ಪಾಕಿಸ್ತಾನ ಗಡಿಯೊಳಗೆ ನುಗ್ಗಿ ಉಗ್ರರ ಅಡಗುತಾಣಗಳ ಮೇಲೆ ಬಾಂಬ್ ದಾಳಿ ನಡೆಸುವ ಮೂಲಕ ಜೈಶ್ ಉಗ್ರರನ್ನು ಹತ್ಯೆಗೈದಿತ್ತು. ಬಳಿಕ ಪಾಕಿಸ್ತಾನ ಕೂಡಾ ಗಡಿಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಯತ್ನಿಸಿ ವಿಫಲವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next