ಜಮ್ಮು-ಕಾಶ್ಮೀರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ಪಾಕಿಸ್ತಾನದ ಲಷ್ಕರ್ ಎ ತೊಯ್ಬಾದ ಕಮಾಂಡರ್ ಸೇರಿದಂತೆ ಮೂವರು ಉಗ್ರರು ಹತ್ಯೆಗೀಡಾಗಿರುವ ಘಟನೆ ಬುಧವಾರ(ಜುಲೈ 14) ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಒಲಿಂಪಿಕ್ಸ್ ತಾರೆಯರ ಜತೆ ಮೋದಿ ಕುಶಲ : ಆ್ಯತ್ಲೀಟ್‌ಗಳಿಗೆ ಧೈರ್ಯ ತುಂಬಿದ ಪ್ರಧಾನಿ
ಭದ್ರತಾ ಪಡೆಯ ಎನ್ ಕೌಂಟರ್ ಗೆ ಪಾಕಿಸ್ತಾನದ ಲಷ್ಕರ್ ಎ ತೊಯ್ಬಾದ ಕಮಾಂಡರ್ ಐಜಾಝ್ ಅಲಿಯಾಸ್ ಅಬು ಹುರೈರಾ ಹಾಗೂ ಇಬ್ಬರು ಸ್ಥಳೀಯ ಉಗ್ರರು ಬಲಿಯಾಗಿರುವುದಾಗಿ ಮೂಲಗಳು ಹೇಳಿವೆ.
ಕಾಶ್ಮೀರ ವಲಯದ ಪೊಲೀಸರ ಹೇಳಿಕೆ ಪ್ರಕಾರ, ಹತ್ಯೆಗೀಡಾದ ಮೂವರು ಉಗ್ರರ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ಭದ್ರತಾ ಪಡೆ ತಿಳಿಸಿದೆ. ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು, ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ನಡೆಸಿದ ದಾಳಿಯಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಎನ್ ಕೌಂಟರ್ ಬಳಿಕ ಪುಲ್ವಾಮಾದಲ್ಲಿ ಕರ್ಫ್ಯೂ ಹೇರಲಾಗಿದೆ ಎಂದು ವರದಿ ತಿಳಿಸಿದೆ.