Advertisement

ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌ :ಪಾಕಿಸ್ಥಾನಿ ಜೆಇಎಂ ಉಗ್ರನ ಹತ್ಯೆ

06:42 PM Apr 23, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಪಾಕಿಸ್ಥಾನಿ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ಮಿರ್ಹಾಮಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ ವೇಳೆ, ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ಎನ್‌ಕೌಂಟರ್‌ಗೆ ನಡೆಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರಗಾಮಿ ಕೊಲ್ಲಲ್ಪಟ್ಟ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರದ ಐಜಿಪಿ ವಿಜಯ್ ಕುಮಾರ್, ಹತ್ಯೆಯಾದ ಉಗ್ರ ಪಾಕಿಸ್ಥಾನಿ ಪ್ರಜೆ ಮತ್ತು ಜೆಎಂ ಸಂಘಟನೆಗೆ ಸೇರಿದವ ಎಂದು ಟ್ವಿಟರ್‌ನಲ್ಲಿ ಬರೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next