Advertisement

ಹಾಡಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಕೊಚ್ಚಿ ಕೊಲೆ

03:55 PM Nov 15, 2021 | Team Udayavani |

ಪಾಲಕ್ಕಾಡ್: ನಾಲ್ವರ ತಂಡವೊಂದು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಹಾಡಹಗಲೇ ಬರ್ಬರವಾಗಿ ಕಡಿದು ಹತ್ಯೆ ಮಾಡಿದ ಘಟನೆ ಕೇರಳದ ಮೊಂಬರಂನಲ್ಲಿ ಸೋಮವಾರ ನಡೆದಿದೆ.

Advertisement

ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಮಂಬರಂನಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ಮಾಡಿದ್ದು, ಹಲವು ಸಾರ್ವಜನಿಕರು ನೋಡಿದ್ದಾರೆ.

ಹತ್ಯೆಗೀಡಾದ ಆರ್‌ಎಸ್‌ಎಸ್ ಕಾರ್ಯಕರ್ತ ಎಲಪ್ಪುಳ್ಳಿ ವಲಯದ ‘ಬೌಧಿಕ್ ಪ್ರಮುಖ್’ ಸಂಜಿತ್ (27) ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸಂಜಿತ್ ಬೈಕನ್ನು ಅಡ್ಡಗಟ್ಟಿ ಮಾರಕಾಯುಧಗಳಿಂದ ಕೊಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಸಂಜಿತ್ ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಹಿಂದೆ ಎಸ್‌ಡಿಪಿಐ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಎಲಾಪುಲ್‌ನಲ್ಲಿ ಎಸ್‌ಡಿಪಿಐ ಮತ್ತು ಆರ್‌ಎಸ್‌ಎಸ್ ನಡುವೆ ಉದ್ವಿಗ್ನತೆ ಮತ್ತು ಸಂಘರ್ಷಮಯ ವಾತಾವರಣವಿತ್ತು ಎಂದು ಹೇಳಲಾಗಿದೆ.

Advertisement

ಇದನ್ನೂ ಓದಿ :ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಬಾಬಾಸಾಹೇಬ್ ಪುರಂದರೆ ಇನ್ನಿಲ್ಲ

ಸಂಜಿತ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಲಕ್ಕಾಡ್ ಟೌನ್ ಪೊಲೀಸರು ಮತ್ತು ಕಸಬಾ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ.

ಹತ್ಯೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್, ಇದೊಂದು ಯೋಜಿತ ಕೊಲೆ ಎಂದು ಆರೋಪಿಸಿದ್ದು, ಕೇರಳದಲ್ಲಿನ ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ಹತ್ಯೆ ಖಂಡಿಸಿ ಸೋಮವಾರ ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಮಲಂಪುಳ ಕ್ಷೇತ್ರದಲ್ಲಿ ಬಿಜೆಪಿ ಹರತಾಳ ನಡೆಸುತ್ತಿದೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next