Advertisement

ಕ್ರೈಸ್ತರಿಂದ ಗರಿಗ‌ಳ ರವಿವಾರ ಆಚರಣೆ

02:08 AM Apr 15, 2019 | Team Udayavani |

ಮಂಗಳೂರು/ಉಡುಪಿ: ಎರಡು ಸಾವಿರ ವರ್ಷಗಳ ಹಿಂದೆ ಯೇಸು ಕಿಸ್ತರು ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್‌’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿಕೊಂಡಿದ್ದರ ಸ್ಮರಣಾರ್ಥ ರವಿವಾರ ಕ್ರೈಸ್ತ ಸಮುದಾಯದವರು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮೆರವಣಿಗೆ ಮತ್ತು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Advertisement

ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಅವರು ಕೊಡಿಯಾಲ್‌ಬೈಲ್‌ನ ಬಿಷಪ್ಸ್‌ ಹೌಸ್‌ ಚಾಪೆಲ್‌ನಲ್ಲಿ ನಡೆದ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಯಲ್ಲಿ ಪಾಲ್ಗೊಂಡು ಸಂದೇಶ ನೀಡಿದರು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಧರ್ಮಪ್ರಾಂತದ ಪ್ರಧಾನ ಗುರು ಮೊ| ಮ್ಯಾಕ್ಸಿಂ ನೊರೋನ್ಹಾ ಅವರ ನೇತೃತ್ವದಲ್ಲಿ ಗರಿಗಳ ರವಿವಾರದ ಕಾರ್ಯಕ್ರಮಗಳು ಜರಗಿದವು. ಕೆಥೆಡ್ರಲ್‌ನ ರೆಕ್ಟರ್‌ ಫಾ| ಜೆ.ಬಿ.ಕ್ರಾಸ್ತಾ ಮತ್ತು ಇತರ ಗುರುಗಳು ಉಪಸ್ಥಿತರಿದ್ದರು.

ಎಲ್ಲ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ನೇತೃತ್ವದಲ್ಲಿ ದಿನದ ಕಾರ್ಯಕ್ರಮಗಳು ಜರಗಿದವು.

ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಫಾ| ಡಾ| ಜೆರಾಲ್ಡ… ಐಸಾಕ್‌ ಲೋಬೊ ಅವರು ಕಾರ್ಕಳ ಸಮೀಪದ ನಕ್ರೆ ಇಮ್ಯಾಕ್ಯುಲೇಟ್‌ ಹಾರ್ಟ್‌ ಚರ್ಚ್‌ನಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದರು. ಪ್ರಧಾನ ಧರ್ಮಗುರು ರೆ|ಫಾ| ವಿನ್ಸೆಂಟ್‌ ಕ್ರಾಸ್ತಾ ಉಪಸ್ಥಿತರಿದ್ದರು.

ಜಿÇÉೆಯ ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತರು ಬೆಳಗ್ಗಿನ ಪ್ರಾರ್ಥನ ವಿಧಿಯಲ್ಲಿ ಪಾಲ್ಗೊಂಡರಲ್ಲದೆ, ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ಸಾಗಿ ಚರ್ಚ್‌ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು.

Advertisement

ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಪ್ರಧಾನ ಧರ್ಮಗುರು ವಂ| ಡಾ| ಲಾರೆ®Õ… ಡಿ’ಸೋಜಾ ಧಾರ್ಮಿಕ ವಿಧಿವಿಧಾನದ ನೇತೃತ್ವ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next