Advertisement

PAN ಲಿಂಕ್‌ ಕಡ್ಡಾಯ

12:30 AM Feb 07, 2019 | Team Udayavani |

ಹೊಸದಿಲ್ಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಆಧಾರ್‌ನೊಂದಿಗೆ ಪ್ಯಾನ್‌ ಲಿಂಕ್‌ ಮಾಡುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್‌ ನಿರ್ದೇಶಿಸಿದೆ. ಶ್ರೇಯಾ ಸೇನ್‌ ಮತ್ತು ಜಯಶ್ರೀ ಸತ್ಪುತೆ ಎಂಬ ಇಬ್ಬರು ಪ್ಯಾನ್‌ ಹಾಗೂ ಆಧಾರ್‌ ಲಿಂಕ್‌ ಮಾಡದೇ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ದೆಹಲಿ ಹೈಕೋರ್ಟ್‌ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಹಿನ್ನೆಲೆಯಲ್ಲಿ ತೀರ್ಪು ನೀಡಿದ ಸುಪ್ರೀಂಕೋರ್ಟ್‌, ನಿರ್ದಿಷ್ಟ ಪ್ರಕರಣದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಲಾಗಿದ್ದು, ಅದರ ವಿಶ್ಲೇಷಣೆಯೂ ಮುಗಿದಿದೆ. ಹೀಗಾಗಿ ಆಧಾರ್‌ ಜೊತೆಗೆ ಪ್ಯಾನ್‌ ಲಿಂಕ್‌ ಕಡ್ಡಾಯ ಇತರ ಎಲ್ಲ ಸನ್ನಿವೇಶಗಳಲ್ಲಿ ಅನ್ವಯಿಸಲಿದೆ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next