Advertisement
ಈ ಕುರಿತಾಗಿ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿರುಯವ ಐಟಿ ಡಿಪಾರ್ಟ್ ಮೆಂಟ್ ಸಿಬಿಡಿಟಿ, ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269ಎಸ್ ಟಿ ನಿಬಂಧನೆಗಳಿಂದ ವಿನಾಯಿತಿ ನೀಡುವುದರೊಂದಿಗೆ ಕೊವಿಡ್ 19 ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ 2 ಲಕ್ಷ ರೂ.ವರೆಗಿನ ಆಸ್ಪತ್ರೆಯ ಬಿಲ್ ನನ್ನು ನಗದು ಪಾವತಿಸಲು ಅನುಮತಿ ನೀಡಿದೆ.
Related Articles
ಇತ್ತೀಚೆಗಷ್ಟೇ ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಕಳೆದ ವಾರವಷ್ಟೇ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಹಾಗೂ ಕೋವಿಡ್ ಕೇರ್ ಸೆಂಟರ್ ಗಳಿಗೆ ರೋಗಿಗಳಿಂದ ಅಥವಾ ಅವರ ಸಂಬಂಧಿಕರಿಂದ ಮೇ 31ರವರೆಗೆ ರೂ.2 ಲಕ್ಷ ರೂ.ಗಳವರೆಗಿನ ಬಿಲ್ ನನ್ನು ನಗದು ರೂಪದಲ್ಲಿ ಸ್ವೀಕರಿಸುವ ಅನುಮತಿ ನೀಡಿತ್ತು.
Advertisement
ಇದಕ್ಕಾಗಿ ಆಸ್ಪತ್ರೆಗಳು ರೋಗಿಗಳ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದೆ.
ಇದನ್ನೂ ಓದಿ : ಚಾಮರಾಜನಗರ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ