Advertisement

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

02:52 PM May 18, 2024 | Team Udayavani |

ಪಣಜಿ: ನವೆಂಬರ್ ತಿಂಗಳಲ್ಲಿ ನಡೆಯಲಿರುವ 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್‍ಎಫ್‍ಐ) ಪೋಸ್ಟರ್ ಪ್ರಸ್ತುತ ನಡೆಯುತ್ತಿರುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಅನಾವರಣಗೊಳಿಸಲಾಗಿದೆ.

Advertisement

ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್‌ 20-28 ರವರೆಗೆ ಪಣಜಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.

ಭಾರತವು ಪ್ರತಿ ವರ್ಷ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತದೆ. ಈ ವರ್ಷ, ಕೇನ್ಸ್ ನಲ್ಲಿ ನಡೆದ ಈ ಉತ್ಸವದಲ್ಲಿ ‘ಇಂಡಿಯಾ ಪೆವಿಲಿಯನ್’ ಅನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಕಾರ್ಯದರ್ಶಿ ಸಂಜಯ್ ಜಾಜು, ಫ್ರಾನ್ಸ್‌ನರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್ ಉಪಸ್ಥಿತರಿದ್ದರು.

ನೆಟ್‍ವರ್ಕಿಂಗ್‌, ದೇವ್‍ಘೇವ್ ಮತ್ತು ಭಾರತೀಯ ಸಿನಿಮಾವನ್ನು ಉತ್ತೇಜಿಸುವಲ್ಲಿ ಇಂಡಿಯಾ ಪೆವಿಲಿಯನ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಂಜಯ್ ಜಾಜು ಹೇಳಿದ್ದಾರೆ.

Advertisement

ಕೇನ್ಸ್ ಚಲನಚಿತ್ರೋತ್ಸವದಲ್ಲಿ ಇಂಡಿಯಾ ಪೆವಿಲಿಯನ್ ಉದ್ಘಾಟನೆ ಭಾರತೀಯ ಚಲನಚಿತ್ರೋದ್ಯಮಕ್ಕೆ ಮಹತ್ವದ ಕ್ಷಣವಾಗಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳು ಕೇನ್ಸ್ ಚಲನಚಿತ್ರೋತ್ಸವದಲ್ಲಿ ದೇಶವನ್ನು ಪ್ರತಿನಿಧಿಸುತ್ತವೆ. ಚಿತ್ರೀಕರಣವನ್ನು ಉತ್ತೇಜಿಸುವ ಯೋಜನೆಗಳನ್ನು ಇಂಡಿಯಾ ಪೆವಿಲಿಯನ್‍ನಲ್ಲಿ ಘೋಷಿಸಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next