ಪಣಜಿ: ಸಮುದ್ರ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್‍ವೊಂದು ಗೋವಾದ ಆಘ್ವಾದ್ ಪೋರ್ಟ್ ನಿಂದ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಸದ್ಯ ದೋಣಿ ಮುಳುಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೋಣಿಯಲ್ಲಿದ್ದ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗೋವಾದ ಆಗ್ವಾದ್ ಪೋರ್ಟ್ ನಿಂದ ಸ್ವಲ್ಪ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬೋಟ್ ಅಪಘಾತಕ್ಕೀಡಾಗಿದೆ. ಘಟನೆ ಸಂಭವಿಸಿದ ಕೂಡಲೇ ದಡದಲ್ಲಿದ್ದ ಇನ್ನೊಂದು ಬೋಟ್ ನ ಸಿಬ್ಬಂದಿ ಅಪಘಾತಕ್ಕೀಡಾದ ಬೋಟ್ ನ ಸಿಬ್ಬಂದಿಯನ್ನು ರಕ್ಷಿಸಿದ್ದಾನೆ. ಈ ಘಟನೆಯ ವೀಡಿಯೊ ಸದ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಸಿಕ್ಕಿರುವ ಮಾಹಿತಿ ಪ್ರಕಾರ ಮುಳುಗಡೆಯಾದ ಬೋಟ್ ಕೇರಳದಲ್ಲಿ ನೋಂದಣಿಯಾಗಿರುವುದರಿಂದ ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸಂಬಂಧಪಟ್ಟ ಬೋಟ್ ಮಾಲೀಕರಿಗೆ ಸರ್ಕಾರದಲ್ಲಿ ಹೆಚ್ಚಿನ ಸಂಪರ್ಕವಿರುವುದರಿಂದ ಈ ರೀತಿಯ ಚಟುವಟಿಕೆಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಬೋಟ್‍ನ ಸಾಮರ್ಥ್ಯ 30 ಪ್ರಯಾಣಿಕರು. ಬೋಟ್ ಮಗುಚಿ ಮುಳುಗಿದಾಗ ಅದರಲ್ಲಿ ಕೇವಲ 6 ಮಂದಿ ಸಿಬ್ಬಂದಿ ಇದ್ದರು. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಒಂದು ತಿಂಗಳ ಹಿಂದೆಯೇ ಬೋಟ್ ಗೋವಾಕ್ಕೆ ಆಗಮಿಸಿದ್ದು, ಈ ಬೋಟ್‍ನ ಪರೀಕ್ಷಾರ್ಥ ಓಡಾಟ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಇದನ್ನೂ ಓದಿ: ಹೆಲಿಕಾಪ್ಟರ್ ಪತನ: ಉಕ್ರೇನ್ ಸಚಿವ, ಮೂವರು ಮಕ್ಕಳು ಸೇರಿದಂತೆ 18 ಮಂದಿ ದುರಂತ ಅಂತ್ಯ