ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಅವರನ್ನು ಅಲ್ಟಿನೊದ ತಮ್ಮ ನಿವಾಸದಲ್ಲಿ ಭೇಟಿಯಾಗಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಗೋವಾ ಸಿನಿಮಾ ಶೂಟಿಂಗ್‍ಗೆ ಜನಪ್ರಿಯ ಸ್ಥಳವಾಗಿದೆ. ಗೋವಾ ರಾಜ್ಯದಲ್ಲಿ ಉದ್ಯಮವನ್ನು ಹೇಗೆ ವಿಸ್ತರಿಸಿ ಹೆಚ್ಚಿನ ವ್ಯಾಪಾರ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂಬುದರ ಕುರಿತು ಅಜಯ್ ದೇವಗನ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಲಾಯಿತು ಎಂದು ಸಾವಂತ್ ಟ್ವೀಟ್ ಮಾಡಿದ್ದಾರೆ.
ನ. 20 ರಂದು ಗೋವಾದಲ್ಲಿ 53ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉಧ್ಘಾಟನೆಗೊಂಡಿದೆ. ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ಗೋವಾಕ್ಕೆ ಆಗಮಿಸಿದ್ದರು.
ಗೋವಾದಲ್ಲಿ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಪಣಜಿಯ ಅಲ್ತಿನೊದಲ್ಲಿರುವ ಸಾವಂತ್ ಅವರ ನಿವಾಸಕ್ಕೆ ತೆರಳಿ ಚಲನಚಿತ್ರೋದ್ಯಮದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಠಿಸುವ ಕುರಿತು, ಗೋವಾದಲ್ಲಿ ಚಲನಚಿತ್ರ ಚಿತ್ರೀಕರಣ ಕುರಿತು ಚರ್ಚೆ ನಡೆಸಿದರು. ಈ ಕುರಿತು ಗೋವಾ ಮುಖ್ಯಮಂತ್ರಿ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.