Advertisement
ಈಗ ಮತ್ತೆ ಸೆ.29ರ ಶುಕ್ರವಾರ ಬೆಳಗ್ಗೆಯಿಂದಲೇ ರಾಜ್ಯದಲ್ಲಿ ಧಾರಾಕಾರ ಮಳೆ ಆರಂಭಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ದಕ್ಷಿಣ ಕೊಂಕಣ ಮತ್ತು ಗೋವಾದ ಕರಾವಳಿ ಪ್ರದೇಶಗಳಲ್ಲಿ ವಾಯುಭಾರ ಕುಸಿತದ ಸ್ಥಿತಿ ರೂಪುಗೊಂಡಿದೆ.
Related Articles
Advertisement
ಗೋವಾ ರಾಜ್ಯದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2.37 ಇಂಚು ಮಳೆಯಾಗಿದ್ದು, ಇದುವರೆಗೆ ಒಟ್ಟು 128.9 ಇಂಚು ಮಳೆ ದಾಖಲಾಗಿದೆ.
ಗೋವಾ ರಾಜಧಾನಿ ಪಣಜಿಯಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ನಗರದ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದೆ. ರಸ್ತೆಯಲ್ಲಿ ನೀರು ತುಂಬಿರುವ ಕಾರಣ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಚಾಲಕರು ನಿಧಾನವಾಗಿ ಚಾಲನೆ ಮಾಡುವಂತಾಗಿದೆ. ಗೋವಾ, ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಮಳೆ ಚುರುಕಾಗಿದ್ದು, ಚಂಡಮಾರುತದ ಸಾಧ್ಯತೆಯೂ ಇದೆ.
ಮಹಾರಾಷ್ಟ್ರ, ಗೋವಾ ಕರಾವಳಿ ಬಂದರುಗಳಲ್ಲಿ ಭಾರಿ ಮಳೆಯಾಗಲಿದ್ದು, 45 ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.